ಪ್ರಮುಖ ಸುದ್ದಿ

ಮಕ್ಕಳಿಗೆ ಕೇಕ್ ತಿನ್ನಿಸುವ ಮೂಲಕ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆ

ಪ್ರಮುಖ ಸುದ್ದಿ, ಚಾಮರಾಜನಗರ, ಆ.೧೨: ಮುಖ್ಯಮಂತ್ರಿ ಸಿದ್ದರಾಮಯ್ಯನವರ ೭೦ನೇ ಜನ್ಮ ದಿನಾಚರಣೆಯನ್ನು ಪಟ್ಟಣದ ದೀನಬಂಧು ಶಾಲೆಯಲ್ಲಿ ಮಕ್ಕಳಿಗೆ ಬೆಳಗಿನ ಉಪಾಹಾರ ಹಾಗೂ ಕೇಕ್ ತಿನ್ನಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಸಿದ್ದರಾಮಯ್ಯ ಅಭಿಮಾನಿ ಬಳಗದ ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಜಿ.ಪಂ ಸದಸ್ಯ ಸದಾಶಿವಮೂರ್ತಿ ಮಕ್ಕಳಿಗೆ ಕೇಕ್ ತಿನ್ನಿಸುವ ಮೂಲಕ ಚಾಲನೆ ನೀಡಿ ಮಾತನಾಡಿ ಸಿದ್ದರಾಮಯ್ಯ ನವರು ಈ ನಾಡು ಕಂಡ ಧೀಮಂತ ನಾಯಕರಾಗಿದ್ದು ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು ಯಶಸ್ವಿಯಾಗಿ ೫ನೇ ವರ್ಷದತ್ತ ಮುನ್ನಗ್ಗುತ್ತಿದೆ. ಸಿದ್ದರಾಮಯ್ಯ ನವರು ಎಲ್ಲಾ ವರ್ಗದ ನಾಯಕರಾಗಿ ಸಾಮಾಜಿಕ ನ್ಯಾಯದಡಿ ಕೆಲಸ ಮಾಡುತ್ತಿದ್ದಾರೆ. ಅಂತಹ ನಾಯಕರ ಹುಟ್ಟುಹಬ್ಬವನ್ನು ದೀನಬಂಧು ಶಾಲೆಯ ಮಕ್ಕಳೊಂದಿಗೆ ಆಚರಿಸುತ್ತಿರುವುದು ಅರ್ಥಪೂರ್ಣ ವಾದುದೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಸಿದ್ದರಾಮಯ್ಯ ಅಭಿಮಾನಿ ಬಳಗದ ಜಿಲ್ಲಾ ಘಟಕದ ಅಧ್ಯಕ್ಷ ಬೆಳ್ಳೇಗೌಡ, ಉಪಾಧ್ಯಕ್ಷ ಸೊತ್ತನಹುಂಡಿ ಸೋಮಣ್ಣ, ಕಾರ್ಯದರ್ಶಿ ಕುದೇರು ಲಿಂಗಣ್ಣ, ಕೆ.ಎಸ್.ಸುರೇಶ್, ಸಂ.ಕಾ. ನಾಗರಾಜು, ಎಪಿಎಂಸಿ ಅಧ್ಯಕ್ಷ ರವಿಕುಮಾರ್, ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಚಿನ್ನಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: