ಮೈಸೂರು

ಡಾ.ಬಿ.ಆರ್ ಅಂಬೇಡ್ಕರ್ ಕುರಿತು ಬಿಜೆಪಿ ಮುಖಂಡ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ : ಕ್ಷಮೆಗೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಆ.14:- ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಕುರಿತು  ಬಿಜೆಪಿ ಮುಖಂಡ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು  ಖಂಡಿಸಿ ಮೈಸೂರು ನಗರ ಕಿಸಾನ್ ಖೇತ್ ಮಜ್ದೂರ್ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಮಾತನಾಡಿ ಖಾಸಗಿ ವಾಹಿನಿಯೊಂದರಲ್ಲಿ ಏರ್ಪಡಿಸಲಾದ ಸ್ವಾತಂತ್ರ್ಯ ಹೋರಾಟ ಕುರಿತ ಚರ್ಚೆಯಲ್ಲಿ ಸಂಘ ಪರಿವಾರದ ಪರವಾಗಿ ಭಾಗವಹಿಸಿದ್ದ ತೇಜಸ್ವಿಸೂರ್ಯ ಕ್ವಿಟ್ ಇಂಡಿಯಾ ಚಳುವಳಿಯ ವಿಚಾರವಾಗಿ ವಿ.ಡಿ.ಸಾವರ್ಕರ್ ಅವರ ನಿಲುವನ್ನು ಸಮರ್ಥಿಸಲು ಅನಗತ್ಯವಾಗಿ ಭಾರತರತ್ನ ಅಪ್ರತಿಮ ರಾಷ್ಟ್ರೀಯವಾದಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರನ್ನು ಪ್ರಸ್ತಾಪಿಸಿ ದೇಶದ್ರೋಹಿ ಎಂಬ ಭಾವನೆ ಮೂಡುವಂತೆ ಮಾತನಾಡಿದ್ದಾರೆ. ಇದು ಅಂಬೇಡ್ಕರ್ ಅವರಿಗೆ ಮಾಡಿರುವ ಅವಮಾನ ಎಂದರು. ಮಾಡಿದ ಅವಮಾನಕ್ಕೆ ಬೇಷರತ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಅಧ್ಯಕ್ಷ ನಾಗೇಂದ್ರ ಎನ್, ರಾಜ್ಯ ಕಾರ್ಯದರ್ಶಿ ಎಸ್.ಸುಹಾಸ್, ಬ್ಲಾಕ್ ಅಧ್ಯಕ್ಷರುಗಳಾದ ಶ್ರೀನಿವಾಸ್, ಲೋಕೇಶ್, ಮೋಹನ್, ಖಮರುದ್ದೀನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: