ಪ್ರಮುಖ ಸುದ್ದಿ

ಸಮಸ್ಯೆ ಬಗೆಹರಿಸಲು ಇಲಾಖೆಯೊಂದಿಗೆ ಸಹಕರಿಸಿ: ಪ್ರಭು

ಪ್ರಮುಖ ಸುದ್ದಿ, ಪಿರಿಯಾಪಟ್ಟಣ, ಆ.೧೪: ಸಾರ್ವಜನಿಕರು ಇಲಾಖೆಗಳೊಂದಿಗೆ ಸಹಕರಿಸಿದಾಗ ಮಾತ್ರ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಪ್ರಭು ತಿಳಿಸಿದರು.
ಪಟ್ಟಣದ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಲಾಖೆಯ ಕಚೇರಿಯನ್ನು ತಾಲೂಕು ಕಚೆರಿಯ ಮೇಲಂತಸ್ತಿನ ಕಟ್ಟಡಕ್ಕೆ ಸ್ಥಳಾಂತರಿಸಿ ಮಾತನಾಡಿದ ಅವರು, ಬಹಳ ದಿನಗಳಿಂದ ಖಾಸಗಿ ಕಟ್ಟಡದಲ್ಲಿ ನಡೆಯುತ್ತಿದ್ದ ಕಚೇರಿಯನ್ನು ಸರ್ಕಾರಿ ಕಟ್ಟಡಕ್ಕೆ ಸ್ಥಳಾಂತರಿಸಿದ್ದು ಒಂದೇ ಸೂರಿನಡಿ ಇಲಾಖೆಗಳು ಕಾರ್ಯನಿರ್ವಹಿಸಬೇಕು ಎಂಬ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಸರ್ಕಾರಿ ಕಟ್ಟಡಕ್ಕೆ ಸ್ಥಳಾಂತರಿಸಿದ್ದು, ನೂತನ ಕಚೇರಿಯಲ್ಲಿ ಪ್ರಯೋಗಾಲಯ ಸೇರಿದಂತೆ ವಿವಿಧ ಶಾಖೆಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರ ಅನುಕೂಲತೆ ಹಾಗೂ ಲಭ್ಯತೆಗೆ ಅನುಗುಣವಾಗಿ ಕುಡಿಯುವ ನೀರನ್ನು ಈ ಪ್ರಯೋಗಾಲಯದಲ್ಲಿ ಸಾರ್ವಜನಿಕರು ಪರೀಕ್ಷಿಸಿಕೊಳ್ಳಬಹುದಾಗಿ ಎಂದು ತಿಳಿಸಿದರು.
ಈ ವೇಳೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಕೆ.ಪ್ರಕಾಶ್, ಇಲಾಖೆಯ ಕುಳ್ಳೇಗೌಡ, ಮುಖಂಡ ಪಿ.ಪಿ.ಮಹದೇವ್, ಚಿಕ್ಕೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: