ಕರ್ನಾಟಕಮೈಸೂರು

ಜೇನುಕುರುಬ, ಕೊರಗ ಸಮುದಾಯದ ಶಿಷ್ಯವೇತನಕ್ಕೆ ಆಹ್ವಾನ

ಮೈಸೂರು, ಆ.14 : ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ವತಿಯಿಂದ ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವಾಸವಿವರುವ ಮೂಲನಿವಾಸಿ ಬುಡಕಟ್ಟು ಸಮುದಾಯಗಳಾದ ಜೇನುಕುರುಬ ಮತ್ತು ಕೊರಗ ಸಮುದಾಯಗಳ ನಿರುದ್ಯೋಗಿ ಯುವಕ, ಯುವತಿಯರಿಗೆ ಮಾಹೆಯಾನ ಶಿಷ್ಯವೇತನ ನೀಡಲಾಗುವುದು.

ಸದರಿ ಜಿಲ್ಲೆಗಳಲ್ಲಿರುವ ಜೇನುಕುರುಬ ಮತ್ತು ಕೊರಗ ಬುಡಕಟ್ಟು ಸಮುದಾಯಗಳ ನಿರುದ್ಯೋಗಿ ಯುವಕ, ಯುವತಿಯರು ವಿವರಗಳನ್ನು ಆಯಾ ಜಿಲ್ಲೆಗಳ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು, ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಅಧಿಕಾರಿಗಳಿಗೆ ನೀಡುವಂತೆ  ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.

-ಎನ್.ಬಿ.

Leave a Reply

comments

Related Articles

error: