ಕರ್ನಾಟಕಪ್ರಮುಖ ಸುದ್ದಿ

ಪಶ್ಚಿಮ ವಲಯ ನೂತನ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ರಾಜ್ಯ(ಮಂಗಳೂರು)ಆ.16:- ಪಶ್ಚಿಮ ವಲಯ ನೂತನ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕರಿಸಿದ್ದಾರೆ.

ನಿರ್ಗಮಿತ ಐಜಿಪಿ ಹರಿಶೇಖರನ್ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿದ ಹೇಮಂತ್ ನಿಂಬಾಳ್ಕರ್  ಮಾತನಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನಸಾಮಾನ್ಯರಿಗೆ ನೆಮ್ಮದಿಯ ಜೀವನ ನಡೆಸಲು ಅಡ್ಡಿಪಡಿಸುವವರಿಗೆ ತಕ್ಕ ಉತ್ತರ ನೀಡಲಾಗುವುದು ಎಂದರು. ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರ ಬಂಧನವಾಗಿದೆಪ್ರಕರಣದಲ್ಲಿ ಇನ್ನಷ್ಟು ಜನರ ಬಂಧನ ಆಗಬೇಕಿದೆ. ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಅವರೊಂದಿಗೆ ಈ ಕುರಿತು ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.  (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: