ಸುದ್ದಿ ಸಂಕ್ಷಿಪ್ತ

ಆ.17 ರಂದು ಜಿ.ಪಂ.ಮಾಸಿಕ ಕೆಡಿಪಿ ಸಭೆ

ಮಡಿಕೇರಿ, ಆ.16: ಕರ್ನಾಟಕ ಅಭಿವೃದ್ಧಿ ಹಾಗೂ 20 ಅಂಶಗಳ ಕಾರ್ಯಕ್ರಮದ ಪ್ರಸಕ್ತ ಸಾಲಿನ 2017ರ ಜುಲೈ ಮಾಹೆಯ ಅಂತ್ಯದ ವರೆಗಿನ ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 17 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಅವರು ತಿಳಿಸಿದ್ದಾರೆ. ಆ.17ರಂದು ನಗರಸಭೆ ಕೌನ್ಸಿಲ್ ಸಾಮಾನ್ಯ ಸಭೆ ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್, 17 ರಂದು ಬೆಳಗ್ಗೆ 11 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ಬಿ.ಶುಭ ಅವರು ತಿಳಿಸಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: