ಮೈಸೂರು

ಮಹಿಳೆಯರ ಸಹಾಯಕ್ಕಾಗಿ ವಿವಿಧ ರೀತಿಯ ಸಾಲ ಯೋಜನೆ : ಅರ್ಜಿ ಆಹ್ವಾನ

ಮೈಸೂರು, ಆ.16 : ಪಿರಿಯಾಪಟ್ಟಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯು 2017-18ನೇ ಸಾಲಿನ ವಿವಿಧ ಯೋಜನೆಗಳ ಫಲಾನುಭವಿಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಿರುಸಾಲ ಯೋಜನೆ: 

ಯಾವುದೇ ಬ್ಯಾಂಕಿನಲ್ಲಿ ಸಾಲ ಪಡೆಯದೆ ಹಾಗೂ ಸಾಲ ಬಾಕಿ ಹೊಂದದ 3 ವರ್ಷ ಮೇಲ್ಪಟ್ಟ ಸ್ತ್ರೀಶಕ್ತಿ ಗುಂಪುಗಳು ಅರ್ಜಿ ಸಲ್ಲಿಸಬಹುದು.

ಚೇತನ ಯೋಜನೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ:

18 ವರ್ಷ ಮೇಲ್ಪಟ್ಟವರು, ಆಶೋದಯ ಸಮಿತಿ ಮತ್ತು ಆಶೋದಯ ಅಕಾಡೆಮಿ ಸಂಸ್ಥೆಯಲ್ಲಿ ನೊಂದಣಿಯಾದ ಲೈಂಗಿಕ ಕಾರ್ಯಕರ್ತೆಯರು ಅರ್ಜಿ ಸಲ್ಲಿಸಬಹುದು.

ಉದ್ಯೋಗಿನಿ ಯೋಜನೆ:

18ರ ಮೇಲ್ಪಟ್ಟು 45ವರ್ಷ ಒಳಗಿನ ವಯೋಮಿತಿ ಹೊಂದಿರುವ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಸಮೃದ್ಧಿ ಯೋಜನೆ :
  • ಈಗಾಗಲೇ ರಸ್ತೆ ಬದಿ ವ್ಯಾಪಾರದಲ್ಲಿ ತೊಡಗಿರುವ ಮಹಿಳೆಯರಿಗೆ ಮಾತ್ರ.
  • ಅರ್ಜಿ ಸಲ್ಲಿಸುವವರ ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು.
  • ಮಹಿಳೆಯರು ಗ್ರಾಮ ಪಂಚಾಯಿತಿ/ ಪುರಸಭೆ ವ್ಯಾಪ್ತಿಯಲ್ಲಿ “ಬೀದಿಬದಿ ವ್ಯಾಪಾರಿ” ಎಂದು ನೊಂದಣಿ ಮಾಡಿಸಿರುವ ಗುರುತಿನ ಚೀಟಿಯನ್ನು ಹೊಂದಿರಬೇಕು.
  • ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ಆದಾಯ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರಗಳನ್ನು ಹೊಂದಿರಬೇಕು.
  • ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ) ಇವರಿಂದ ಬೀದಿಬದಿ ವ್ಯಾಪಾರಿ ಎಂದು ಧೃಢೀಕರಿಸಿದ ದಾಖಲೆಯನ್ನು ಪಡೆದಿರಬೇಕು.
  • ಒಬ್ಬ ಫಲಾನುಭವಿ ಕೇವಲ ಒಂದು ಬಾರಿ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08223-274742 ನ್ನು ಸಂಪರ್ಕಿಸಬಹುದು.

-ಎನ್.ಬಿ.

Leave a Reply

comments

Related Articles

error: