ಕರ್ನಾಟಕಮೈಸೂರು

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಮಂಡ್ಯ, ಆ.17 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸ್ಪರ್ಧಾಚೇತನ ಯೋಜನೆಯಡಿ ನಿರುದ್ಯೋಗಿ ವಿದ್ಯಾವಂತ ವಿಕಲಚೇತನರಿಗೆ ಕೇಂದ್ರ ಲೋಕಸೇವಾ ಆಯೋಗ, ಕರ್ನಾಟಕ ಲೋಕಸೇವಾ ಆಯೋಗ, ಬ್ಯಾಂಕ್, ಜೀವ ವಿಮಾ ನಿಗಮ, ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು ಮತ್ತು ಇತರೆ ಸಂಸ್ಥೆಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸಹಾಯಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ಕಛೇರಿಯ ದೂರವಾಣಿ ಸಂಖ್ಯೆ 08232-231090, 239234 ನ್ನು ಸಂಪರ್ಕಿಸಬಹುದು.

-ಎನ್.ಬಿ.

Leave a Reply

comments

Related Articles

error: