ಸುದ್ದಿ ಸಂಕ್ಷಿಪ್ತ

ಆ. 20: ಡಿ. ದೇವರಾಜ ಅರಸು ಜನ್ಮ ದಿನಾಚರಣೆ ಸಮಾರಂಭ

ಚಾಮರಾಜನಗರ,ಆ. 17 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ  ಕಲ್ಯಾಣ ಇಲಾಖೆ ವತಿಯಿಂದ ಸಾಮಾಜಿಕ ಕ್ರಾಂತಿಯ ಹರಿಕಾರ, ಸಾಧನೆಗಳ ಸರದಾರ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 20ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 9 ಗಂಟೆಗೆ ಚಾಮರಾಜೇಶ್ವರ ದೇವಾಲಯ ಬಳಿ ಡಿ. ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಯು ಕಲಾತಂಡಗಳೊಂದಿಗೆ ಆರಂಭವಾಗಲಿದೆ.  ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಅರಸು ಅವರ ಜನ್ಮ ದಿನಾಚರಣೆ ಸಮಾರಂಭವನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್  ಉದ್ಘಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.

ಮೈಸೂರಿನ ಪ್ರಗತಿಪರ ಸಾಹಿತಿಗಳಾದ ಪ್ರೊ. ಕಾಳೇಗೌಡ ನಾಗವಾರ ಡಿ. ದೇವರಾಜ ಅರಸು ಅವರ ಬಗ್ಗೆ ಉಪನ್ಯಾಸ ನೀಡುವರು. ಮಧ್ಯಾಹ್ನ 2 ಗಂಟೆಗೆ ಇಲಾಖೆಯ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: