ಸುದ್ದಿ ಸಂಕ್ಷಿಪ್ತ

ಹಿರಿಯ ನಾಗರಿಕರ ಕ್ಷೇತ್ರದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಆ. 17:– ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂಬಂಧ 7 ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ ಅಥವಾ ಕ್ರೀಡೆ, ಸಮಾಜ ಸೇವೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಸಂಸ್ಥೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.

6 ವೈಯುಕ್ತಿಕ ಪ್ರಶಸ್ತಿ ಹಾಗೂ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಒಂದು ಸಂಸ್ಥಗೆ ಪ್ರಶಸ್ತಿ ನೀಡಲಾಗುವುದು.  ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಡನೆ ಆಗಸ್ಟ್ 28ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ (ದೂ.ಸಂ. 08226-223688, 224688) ಸಂಪರ್ಕಿಸುವಂತೆ ತಿಳಿಸಿದೆ.      (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: