ಮೈಸೂರು

ಸಮೃದ್ಧ ಜೀವನ್ ಮಲ್ಟಿ ಸ್ಟೇಟ್ ಮಲ್ಟಿ ಪರ್ಪಸ್ ಕೋ.ಆಪರೇಟಿವ್ ಸೊಸೈಟಿಯಿಂದ ವಂಚನೆ : ಗ್ರಾಹಕರಿಗೆ ಹಣ ದೊರಕಿಸಿಕೊಡಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಆ.17:- ಸಮೃದ್ಧ ಜೀವನ್ ಮಲ್ಟಿ ಸ್ಟೇಟ್ ಮಲ್ಟಿ ಪರ್ಪಸ್ ಕೋ.ಆಪರೇಟಿವ್ ಸೊಸೈಟಿಯು ಏಕಾಏಕಿ ಮುಚ್ಚಿದ್ದು, ಗ್ರಾಹಕರನ್ನು ವಂಚಿಸಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿತು.

ಮೈಸೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಈ ಸೊಸೈಟಿಯು ಗ್ರಾಹಕರಿಂದ ಠೇವಣಿ ಸಂಗ್ರಹಿಸಿ ಜಮಾವಣೆ ಮಾಡಿದ್ದು ಮೈಸೂರು ಜಿಲ್ಲೆಯಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಗ್ರಾಹಕರಿಂದ ಠೇವಣಿ ಸಂಗ್ರಹಿಸಿ ಕಂಪನಿಗೆ ಸಂದಾಯ ಮಾಡಿಕೊಂಡಿದ್ದಾರೆ. ಆದರೆ ಕಳೆದ ಒಂದು ವರ್ಷದಿಂದ ಕಂಪನಿಯನ್ನು ಮುಚ್ಚಿದ್ದು, ಗ್ರಾಹಕರನ್ನು ವಂಚಿಸಲಾಗಿದೆ. ಗ್ರಾಹಕರು ನೀಡಿದ ಹಣಕ್ಕೆ ಭದ್ರತೆ ಇಲ್ಲವಾಗಿದೆ. ಗ್ರಾಹಕರು ಕಾರ್ಯಕರ್ತರ ಮನೆ ಮುಂದೆ ಬಂದು ಗಲಾಟೆ ಮಾಡುತ್ತಿದ್ದಾರೆ. ಕಾನೂನು ರೀತ್ಯಾ ಗ್ರಾಹಕರಿಗೆ ಸಂಸ್ಥೆಯಿಂದ ಬರಬೇಕಾದ ಎಲ್ಲಾ ಹಣವನ್ನು ದೊರಕಿಸಿಕೊಡಬೇಕೆಂದು ಒತ್ತಾಯಿಸಿದರು.

ಕರವೇ ರಾಜ್ಯಾಧ್ಯಕ್ಷ ಹರೀಶ್, ಜಿಲ್ಲಾಧ್ಯಕ್ಷ ಬಸವಣ್ಣ ಸೇರದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: