ಮೈಸೂರು

ವಿದ್ಯಾರ್ಥಿಗಳು ಶ್ರಮಕ್ಕೆ ಆದ್ಯತೆ ನೀಡಬೇಕು: ನಾಗೇಗೌಡ

ಮೈಸೂರು, ಆ.೧೭: ನಗರದ ಟಿಟಿಎಲ್ ವಾಣಿಜ್ಯ ವ್ಯವಹಾರ ನಿರ್ವಹಣಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕ್ರೀಡಾ, ಸಾಂಸ್ಕೃತಿಕ ವೇದಿಕೆಗಳ ಉದ್ಘಾಟನಾ ಸಮಾರಂಭವನ್ನು ಬುಧವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಸರಸ್ವತಿಪುರಂ ವೃತ್ತ ನಿರೀಕ್ಷಕ ಎನ್.ಸಿ.ನಾಗೇಗೌಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸಮಯ ವ್ಯರ್ಥ ಮಾಡದೆ ಸಿಕ್ಕ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಂಡು ಮುಂದೆ ಬರಬೇಕು. ಶ್ರಮಪಟ್ಟು ಗುರಿ ಸಾಧನೆಯೆಡೆಗೆ ಮುನ್ನುಗ್ಗಿದರೆ ಎಂತಹ ಸಾಧನೆಯನ್ನಾದರೂ ಮಾಡಬಹುದು. ಅಲ್ಲದೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಸಮಯಕ್ಕೆ ಆದ್ಯತೆ ನೀಡಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಟಿಟಿಎಲ್ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ ಕಾರ್ಯದರ್ಶಿ ಪ್ರೊ.ಎಚ್.ಎನ್.ಅಶ್ವತ್ಥನಾರಾಯಣ, ಆಡಳಿತಾಧಿಕಾರಿ ಬಿ.ವಿ.ಪ್ರಶಾಂತ್, ಪ್ರಾಚಾರ್ಯರಾದ ಡಾ.ಎಂ.ಪ್ರೀತಿ, ಪ್ರೊ.ಬಿ.ಎನ್.ಮಾರುತಿ ಪ್ರಸನ್ನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: