ಪ್ರಮುಖ ಸುದ್ದಿ

ಬಿಎಂಟಿಸಿ ಬಸ್ ಡಿಕ್ಕಿ: ಪಾದಚಾರಿ ಸಾವು

ಪ್ರಮುಖ ಸುದ್ದಿ, ಬೆಂಗಳೂರು, ಆ.೧೭- ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ಕೆ.ಆರ್.ಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ದೇವಸಂದ್ರದ ನಿವಾಸಿ ಸೈಯದ್ ಜಾನ್‌ಪಾಷ(೫೦) ಮೃತಪಟ್ಟ ದುರ್ದೈವಿ. ಒಎಂ ರಸ್ತೆಯ ಕಾರ್ತಿಕ್ ಮೋಟಾರ್‍ಸ್ ಸಮೀಪದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಸೈಯದ್ ಜಾನ್‌ಪಾಷ ರಸ್ತೆ ದಾಟುತ್ತಿದ್ದಾಗ ಅತಿ ವೇಗವಾಗಿ ಮುನ್ನುಗ್ಗಿದ ಬಿಎಂಟಿಸಿ ಬಸ್ ಇವರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ವಿಷಯ ತಿಳಿದ ಕೆ.ಆರ್.ಪುರ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಶವವನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. (ವರದಿ ಬಿ.ಎಂ)

Leave a Reply

comments

Related Articles

error: