ಸುದ್ದಿ ಸಂಕ್ಷಿಪ್ತ

ಆ.21 : ದಸರಾ ಕ್ರೀಡಾಕೂಟ

ಮಡಿಕೇರಿ ಆ.18-ಪ್ರಸಕ್ತ (2017-18ನೇ) ಸಾಲಿನ ಮೂರು ತಾಲೂಕು ಹಾಗೂ ಕೊಡಗು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಗಸ್ಟ್, 21 ರಂದು ಸೋಮವಾರಪೇಟೆ ತಾಲೂಕಿನ ಕೂಡಿಗೆ ಕ್ರೀಡಾ ಶಾಲೆ ಹಾಗೂ ಡಯಟ್ ಆಟದ ಮೈದಾನ, ಆಗಸ್ಟ್, 23 ರಂದು ವಿರಾಜಪೇಟೆ ತಾಲ್ಲೂಕಿನ ಪೊನ್ನಂಪೇಟೆ ತಾಲೂಕು ಮಿನಿ ಕ್ರೀಡಾಂಗಣದಲ್ಲಿ, ಆಗಸ್ಟ್, 26 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಆಗಸ್ಟ್, 31 ರಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯಲಿದೆ. ಆಸಕ್ತ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ದೂ.ಸಂ: 08272-228985 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ ಬಾಯಿ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: