ಮೈಸೂರು

ಸೈಕಲ್ ಸವಾರನಿಗೆ ದ್ವಿಚಕ್ರವಾಹನ ಡಿಕ್ಕಿ : ಸೈಕಲ್ ಸವಾರ ಸಾವು

ಮೈಸೂರು,ಆ.19:- ಸೈಕಲ್ ಸವಾರನಿಗೆ ದ್ವಿಚಕ್ರವಾಹನ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೃತನನ್ನು ಕೂರ್ಗಳ್ಳಿ ನಿವಾಸಿ ಸಿದ್ದಯ್ಯ(70) ಎಂದು ಗುರುತಿಸಲಾಗಿದೆ. ಇವರು ಸೈಕಲ್ ಮೇಲೆ ಎಲ್ & ಟಿ ಫ್ಯಾಕ್ಟರಿ ರಸ್ತೆಯಲ್ಲಿ ಸಾಗಿ ಬರುತ್ತಿದ್ದರು. ಎದುರಿನಿಂದ ಸ್ಪ್ಲೆಂಡರ್ ದ್ವಿಚಕ್ರವಾಹನದಲ್ಲಿ ಬಂದ ಸವಾರ ಎದುರಿನಿಂದ ಬರುತ್ತಿದ್ದ ಸೈಕಲ್ ಸವಾರನಿಗೆ ಗುದ್ದಿದ್ದು, ಅವರು ಕೆಳಕ್ಕೆ ಉರುಳಿದ್ದಾರೆ. ತಲೆಗೆ ತೀವ್ರ ರೀತಿಯಲ್ಲಿ ಪೆಟ್ಟಾಗಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿವಿಪುರಂ ಠಾಣೆಯ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ದ್ವಿಚಕ್ರವಾಹನ ಸವಾರ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: