ಕರ್ನಾಟಕ

ಚಾ.ನಗರ ಅಭಿವೃದ್ಧಿಪಡಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ವಾಟಾಳ್ ನಾಗರಾಜ್ ರಿಂದ ಪ್ರತಿಭಟನೆ

ಚಾಮರಾಜನಗರ,ಆ.19-ಚಾಮರಾಜನಗರದಲ್ಲಿ 20 ವರ್ಷದಿಂದ ಅಭಿವೃದ್ಧಿ ಕುಂಠಿತವಾಗಿದೆ. ರಾಜ್ಯ ಸರ್ಕಾರ ಚಾಮರಾಜನಗರವನ್ನು ಅಭಿವೃದ್ಧಿ ಪಡಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.

ಚಾಮರಾಜನಗರದಿಂದ ಕೇರಳ ಮತ್ತು ತಮಿಳುನಾಡಿಗೆ ರೈಲು ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ನಿಲ್ದಾಣ ಮುಂಭಾಗ ಬಂದೋಬಸ್ತ್ ಕಾರ್ಯದಲ್ಲಿ ತೊಡಗಿದ ಪೊಲೀಸರು ವಾಟಳ್ ನಾಗರಾಜ್ ಅವರನ್ನು ಬಂಧಿಸಿದರು. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: