ಸುದ್ದಿ ಸಂಕ್ಷಿಪ್ತ

ಚಾಮರಾಜ ಕ್ಷೇತ್ರ: ಬಿಜೆಪಿ ಯುವ ಮೋರ್ಚಾ ಪದಗ್ರಹಣ ಕಾರ್ಯಕ್ರಮ

ಅ. 23 ರಂದು ಬೆಳಗ್ಗೆ 10.30ಕ್ಕೆ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಪದಗ್ರಹಣ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯ ಯುವಮೋರ್ಚಾ ಅಧ್ಯಕ್ಷರಾದ ಸಂಸದ ಪ್ರತಾಪ್ ಸಿಂಹ, ರಾಜ್ಯ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಸೂರ್ಯ, ಮೈಸೂರು ಯುವ ಮೋರ್ಚಾ ಉಸ್ತುವಾರಿ ವಹಿಸಿಕೊಂಡಿರುವ ತಮ್ಮೇಗೌಡ, ರಾಜ್ಯ ಕಾರ್ಯದರ್ಶಿ ದೇವರಾಜ್ ಸೇರಿದಂತೆ ಬಿಜೆಪಿ ಮುಖಂಡರಾದ ವಿಧಾನ ಪರಿಷತ್ ಸದಸ್ಯ ವಿಜಯ್ ಶಂಕರ್, ನಾಗೇಂದ್ರ, ಗೋಕುಲ್ ಗೋವರ್ಧನ್, ಮಂಜುನಾಥ್, ಮೈ.ವಿ. ರವಿಶಂಕರ್, ಎಂ.ಜೆ. ಕಿರಣ್ ಗೌಡ ಅವರುಗಳು ಉಪಸ್ಥಿತರಿರುವರು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದ್ದಾರೆ.

Leave a Reply

comments

Related Articles

error: