ಮೈಸೂರು

ತಮಿಳುನಾಡಿಗೆ ನೀರು ಹರಿಸದಂತೆ ರಾಜ್ಯ ರೈತಸಂಘ ಒತ್ತಾಯ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತಸಂಘದ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.

ಮೈಸೂರಿನ ಗಾಂಧಿ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರಲ್ಲದೇ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಎನ್.ಎಸ್. ವರ್ಮಾ ಅವರು ಮಾತನಾಡಿ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರೈತರಿಗೆ ಅನ್ಯಾಯವಾಗಿದೆ. 100 ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದರೂ ಇದುವರೆಗೂ ಸರ್ಕಾರ ರೈತರಿಗೆ ಬರ ಪರಿಹಾರವನ್ನು ವಿತರಣೆ ಮಾಡಿಲ್ಲ. ರೈತರು ಬೆಳೆ ಇಲ್ಲದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಸರ್ಕಾರ ರೈತರಿಗೆ ಬರ ಪರಿಹಾರವನ್ನು ವಿತರಿಸಬೇಕು. ತಮಿಳುನಾಡಿಗೆ ನೀರು ಹರಿಸಬಾರದು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಂಡ್ಯ ಜಿಲ್ಲಾ ಸಂಚಾಲಕ ಕಿರಂಗೂರು ಪಾಪು, ಮದ್ದೂರು ಗಣೇಶ್ ಮತ್ತಿತರರು ಪಾಲ್ಗೊಂಡಿದ್ದರು.

Leave a Reply

comments

Related Articles

error: