ಪ್ರಮುಖ ಸುದ್ದಿಮೈಸೂರು

ಡಿನೋಟಿಫೈ ಪ್ರಕರಣ: ಯಡಿಯೂರಪ್ಪ ವಿರುದ್ದ ಎಸಿಬಿ ಗೆ ದೂರು ನೀಡಿರುವುದಕ್ಕೆ ವಿರೋಧ ; ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಮೈಸೂರು, ಆ.20:-  ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ದ ಎಸಿಬಿ ಗೆ ದೂರು ನೀಡಿರುವುದನ್ನು ವಿರೋಧಿಸಿ ಮೈಸೂರಿನಲ್ಲೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮೈಸೂರಿನ ಗಾಂಧಿ ವೃತ್ತದ   ದೊಡ್ಡ ಗಡಿಯಾರದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪ ವಿರುದ್ದ ಸುಳ್ಳು ಸಾಕ್ಷ್ಯ ಹೇಳುವಂತೆ ಸರ್ಕಾರದ ಗಣಿ ಇಲಾಖೆಯ ಉಪ ಕಾರ್ಯದರ್ಶಿ ಬಸವರಾಜೇಂದ್ರ ಮೇಲೆ ಎಸಿಬಿ ಅಧಿಕಾರಿಗಳು ಒತ್ತಡ ಹೇರಿರುವುದನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.
ಯಡಿಯೂರಪ್ಪ ವಿರುದ್ಧ ಸುಳ್ಳು ದೂರು ನೀಡಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.  ಪ್ರತಿಭಟನೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರಾದ ಕೋಟೆ ಶಿವಣ್ಣ, ನಂದೀಶ್ ಪ್ರೀತಂ, ಡಾ.ಮಂಜುನಾಥ್, ಪ್ರಭಾಕರ ಶಿಂಧೆ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: