
ಪ್ರಮುಖ ಸುದ್ದಿಮೈಸೂರು
ಡಿ.ದೇವರಾಜ ಅರಸು ನಾಡಿಗೆ ನೀಡಿದ ಕೊಡುಗೆ ಸ್ಮರಣೀಯ : ಎಂ.ಕೆ.ಸೋಮಶೇಖರ್
ಮೈಸೂರು,ಆ.20:- ಮೈಸೂರಿನ ಕಲಾಮಂದಿರದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ ಜಯಂತಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಶಾಸಕ ಎಂ.ಕೆ. ಸೋಮಶೇಖರ್ ಡಿ.ದೇವರಾಜ ಅರಸು ಭಾವಚಿತ್ರಕ್ಕೆ ಪುಷ್ಪನಮನಗೈದು ಗೌರವ ಸಲ್ಲಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಡಿ.ದೇವರಾಜ ಅರಸು ತಮ್ಮ ಆಡಳಿತಾವಧಿಯಲ್ಲಿ ನಾಡಿಗೆ ನೀಡಿದ ಕೊಡುಗೆ ಸ್ಮರಣೀಯ ಎಂದರು. ಈ ಸಂದರ್ಭ ಶಾಸಕ ಜಿ.ಟಿ. ದೇವೇಗೌಡ, ಮೇಯರ್ ರವಿಕುಮಾರ್, ಜಿಲ್ಲಾಧಿಕಾರಿ ಡಿ. ರಂದೀಪ್, ಮುಡಾ ಆಯುಕ್ತ ಡಾ. ಮಹೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)