ಸುದ್ದಿ ಸಂಕ್ಷಿಪ್ತ

ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಸೋಮವಾರಪೇಟೆ ಆ.20:- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಘಟಕ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಆ.21ರಂದು  ಸ್ಥಳೀಯ ಬಿಟಿಸಿಜಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಲಿದೆ.

ಪೂರ್ವಾಹ್ನ 11 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆ ಸಂಸ್ಥಾಪಕ  ಅಧ್ಯಕ್ಷ ಅಭಿಮನ್ಯುಕುಮಾರ್  ಉದ್ಘಾಟಿಸಲಿದ್ದು, ಕುವೆಂಪು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಲಿಂಗರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಯೋಜನಾಧಿಕಾರಿ ವೈ. ಪ್ರಕಾಶ್, ಠಾಣಾಧಿಕಾರಿ ಶಿವಣ್ಣ, ಪ್ರಾಂಶುಪಾಲ ಬಾಲಕೃಷ್ಣ ಅವರುಗಳು ಭಾಗವಹಿಸಲಿದ್ದು, ಪುತ್ತೂರಿನ ಬಾಲಕೃಷ್ಣ ಪೋರ್ದಾಳ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಲಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: