ಕರ್ನಾಟಕ

ಅಪರಿಚಿತ ವಾಹನ ಡಿಕ್ಕಿ ಹೊಡೆದು ಗೃಹಿಣಿ ಸಾವು

ರಾಜ್ಯ (ಮಂಡ್ಯ)ಆ.21:-  ಅಮಾವಾಸ್ಯೆ ಪೂಜೆ ಸಲ್ಲಿಸಲು ಬೆಳ್ಳಂಬೆಳಗ್ಗೆ ದೇವಸ್ಥಾನಕ್ಕೆ ಹೊರಟಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ, ಮದ್ದೂರು ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಶಿಕ್ಷಕರ ಬಡಾವಣೆಯ ನಿವಾಸಿಯಾದ ನಿವೃತ್ತ ಶಿಕ್ಷಕ ತಿಮ್ಮಯ್ಯ ಅವರ ಪತ್ನಿ  ಸುಧಾ(54) ಎಂಬವರೇ ಅಪಘಾತದಲ್ಲಿ ಮೃತಪಟ್ವರಾಗಿದ್ದಾರೆ. ಸುಧಾ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಅಮವಾಸ್ಯೆ ಪೂಜೆ ಸಲ್ಲಿಸಲು ಮದ್ದೂರಮ್ಮ ದೇವಾಲಯಕ್ಕೆ ಹೊರಟಿದ್ದರು. ಈ ವೇಳೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಸುಧಾ ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಿಂದ ಸುಧಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವಾಲಯಕ್ಕೆ ಪೂಜೆಗೆಂದು ಹೋದ ಸುಧಾ ಅವರು ಮೃತಪಟ್ಟಿರುವ ವಿಷಯ ತಿಳಿದು ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: