
ಕರ್ನಾಟಕ
ಮೂಲಭೂತ ಕರ್ತವ್ಯಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳಿ : ಮಧುಸೂದನ
ರಾಜ್ಯ(ಚಾಮರಾಜನಗರ)ಆ,21:- ಮೂಲಭೂತ ಹಕ್ಕುಗಳಿಗೆ ಚ್ಯುತಿಯಾದಾಗ ಅದನ್ನು ಕಾನೂನಾತ್ಮಕವಾಗಿ ಪರಿಹಾರ ಪಡೆದುಕೊಳ್ಳುವ ಜನ ಸಮುದಾಯ ಮೂಲಭೂತ ಕರ್ತವ್ಯವನ್ನೂ ಪಾಲಿಸುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದು ಸಿವಿಲ್ ನ್ಯಾಯಾಧೀಶ ಡಿ.ಕೆ. ಮಧುಸೂದನ ವಿದ್ಯಾರ್ಥಿಗಳಿಗೆ ಕರೆ ನೀಡಬೇಕು.
ಅವರು ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಮೂಲಭೂತ ಹಕ್ಕುಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ವ್ಯಕ್ತಿ, ವಿದ್ಯಾರ್ಥಿ ದಿಸೆಯಲ್ಲಿ ಶಿಕ್ಷಣದಲ್ಲಿ, ವೃತ್ತಿಯಲ್ಲಿ ತಮ್ಮ ಕ್ಷೇತ್ರದಲ್ಲಿ ಉನ್ನತ ಪರಿಣತಿ ಹೊಂದುವುದೇ ಮೂಲಭೂತ ಕರ್ತವ್ಯವಾಗಿದೆ. ಇದೇ ಸಂವಿಧಾನದ ಆಶಯವಾಗಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಸಿದ್ದರಾಜು ಮಾತನಾಡಿ, ಸಂವಿಧಾನದ 5 ಎ ತಿದ್ದುಪಡಿಯ ಮೂಲಕ ಮೂಲಭೂತ ಕರ್ತವ್ಯವನ್ನು ಸೇರಿಸಲಾಯಿತು . ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಕರ್ತವ್ಯಗಳನ್ನು ನಾವು ಚಾಚು ತಪ್ಪದೇ ಪಾಲಿಸಬೇಕು. ದೇಶವನ್ನು ಸದೃಢ ಮಾಡುವಲ್ಲಿ ವಿಶ್ವದ ಮುಂಚೂಣಿ ರಾಷ್ಟ್ರಕ್ಕೆ ಕೊಂಡೊಯ್ಯುವ ಸಾಮರ್ಥ್ಯ ನಮ್ಮ ಸಂವಿಧಾನದ ಹಕ್ಕು ಹಾಗೂ ಕರ್ತವ್ಯಗಳಿಗಿದ್ದು ಇದರ ಪಾಲನೆಗೆ ಪ್ರತಿಯೊಬ್ಬರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ, ವಕೀಲ ಸಂಘದ ಕಾರ್ಯದರ್ಶಿ ಕೆ.ಬಿ. ಶಶಿಧರ್ ಮಾತನಾಡಿದರು. ವಕೀಲರಾದ ನಾಗರಾಜು, ಆರ್. ಶ್ರೀನಿವಾಸ ಮೂರ್ತಿ, ಶಾಲೆಯ ಮುಖ್ಯ ಶಿಕ್ಷಕ ಉಮಾಶಂಕರ್ ರಂಗಸ್ವಾಮಿ ಇತರರು ಇದ್ದರು. (ಜಿ.ಎನ್,ಎಸ್.ಎಚ್)