ಪ್ರಮುಖ ಸುದ್ದಿ

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಸಿ.ಎಂ ಇಬ್ರಾಹಿಂ 

ಪ್ರಮುಖ ಸುದ್ದಿ, ಬೆಂಗಳೂರು, ಆ.೨೧: ವಿಧಾನಪರಿಷತ್ ಉಪ ಚುನಾವಣೆಗೆ ಸಿ.ಎಂ.ಇಬ್ರಾಹಿಂ ಸೋಮವಾರ ನಾಮಪತ್ರ ಸಲ್ಲಿಸಿದರು.

ಪಕ್ಷದ ಮುಖಂಡರೊಂದಿಗೆ ತೆರಳಿದ ಅವರು ತಮ್ಮ ಉಮೇದವಾರಿಕೆ ಸಲ್ಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ನಾಯಕರು ನನ್ನ ಮೇಲೆ ಭರವಸೆ ಇಟ್ಟು ಪ್ರಮುಖ ಜವಾಬ್ದಾರಿ ನೀಡಿದ್ದಾರೆ. ಅದನ್ನೇ ಸಮರ್ಪಕವಾಗಿ ನಿಬಾಯಿಸುತ್ತೇನೆ. ನನಗೆ ಯಾವ ಸಚಿವ ಸ್ಥಾನವೂ ಬೇಡ. ಸಚಿವ ಸ್ಥಾನದ ಆಕಾಂಕ್ಷಿಯೂ ನಾನಲ್ಲ ಎಂದು ಸ್ಪಷ್ಟಪಡಿಸಿದರು.

ಹೈಕಮಾಂಡ್ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿ ನೀಡಿದ್ದಾರೆ. ಅದನ್ನು ನಿಭಾಯಿಸುತ್ತೇನೆ, ಪಕ್ಷವನ್ನು ಸಂಘಟಿಸುವ ಮೂಲಕ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ ಅವರು ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದರು. (ವರದಿ ಬಿ.ಎಂ)

 

Leave a Reply

comments

Related Articles

error: