ಮೈಸೂರು

ದೇಶದಲ್ಲಿ ಬಿಜೆಪಿ ಬದಲಾವಣೆಯ ಅಲೆ ಎಬ್ಬಿಸಿದೆ: ಪ್ರತಾಪ್ ಸಿಂಹ

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದು, ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಅನುಮಾನವೇ ಇಲ್ಲ. ದೇಶದಲ್ಲಿ ಬಿಜೆಪಿ ಬದಲಾವಣೆಯ ಅಲೆ ಎಬ್ಬಿಸಿದೆ ಎಂದು ಸಂಸದ ಹಾಗೂ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಪ್ರತಾಪ್‌ಸಿಂಹ ಹೇಳಿದರು.

ಭಾನುವಾರ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಸದ ಪ್ರತಾಪ್ ಸಿಂಹ ಮಾತನಾಡಿದರು. ರಾಜ್ಯದಲ್ಲಿ ಜನತೆ ಬದಲಾವಣೆ ಬಯಸಿದ್ದು ಬಿಜೆಪಿ ಅಧಿಕಾರಕ್ಕೆ ಏರಬೇಕೆಂಬ ಹಂಬಲ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷದ ಪ್ರಮುಖ ಶಕ್ತಿಯಾದ ಯುವಕರು ಒಗ್ಗಟ್ಟಾಗಿ ಕೆಲಸ ಮಾಡಿ ಯಡಿಯೂರಪ್ಪ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿಸಲು ಶ್ರಮಿಸಬೇಕು. ವಹಿಸಿಕೊಂಡಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.

ಯುವ ಮೋರ್ಚಾದ ಅಧ್ಯಕ್ಷರಾಗಿ ಕಿರಣ್‌ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್, ಪದಾಧಿಕಾರಿಗಳಾಗಿ ಹರೀಶ್, ಅಶೋಕ್, ಗುರುದತ್ತ, ಜಸ್ಕೋ ರವಿ, ಸಂತೋಷ್, ಮಲ್ಲೇಶ್, ಮೋಹನ್‌ ಕುಮಾರ್, ಕಾರ್ಯಕಾರಿಣಿ ಸದಸ್ಯರಾಗಿ ನೀತು, ವೆಂಕಟೇಶ ಆಚಾರ್, ಆದರ್ಶ, ಹರೀಶ, ಸೋಮಶೇಖರ್, ಕಿರಣ್, ಜಗದೀಶ್, ನರಸಿಂಹ, ವಿನಯ್, ಶಿವಮೂರ್ತಿ, ಸಂಪತ್ ಕುಮಾರ್ ಅಧಿಕಾರ ಸ್ವೀಕರಿಸಿದರು.

ವೇದಿಕೆಯಲ್ಲಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ತಮ್ಮೇಶ್‌ಗೌಡ, ನಗರ ಯುವ ಮೊರ್ಚಾ ಅಧ್ಯಕ್ಷ ಗೋಕುಲ್ ಗೋವರ್ಧನ್, ಮಾಜಿ ಮುಡಾ ಅಧ್ಯಕ್ಷ ನಾಗೇಂದ್ರ, ಕುರುಣಾಕರ್, ಪಾಲಿಕೆ ಸದಸ್ಯ ಗಿರೀಶ್ ಪ್ರಸಾದ್, ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಮಹದೇವಸ್ವಾಮಿ, ರಾಜೇಶ್, ಸತೀಶ್, ದೇವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: