ಮೈಸೂರು

ಕಾಂಗ್ರೆಸ್ ಶಾಸಕರು ಬಿಜೆಪಿಯತ್ತ ತಲೆಹಾಕಿಯೂ ಮಲಗಲ್ಲ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಶಾಸಕರು ಬಿಜೆಪಿಯತ್ತ ತಲೆ ಹಾಕಿಯೂ ಮಲಗಲ್ಲ. ಯಡಿಯೂರಪ್ಪ ಈ ರೀತಿಯ ಸುಳ್ಳುಗಳನ್ನು ಹಲವು ಬಾರಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನಂಜನಗೂಡಿನಲ್ಲಿ ಭಾನುವಾರ ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುತ್ತಿದ್ದಾರೆ ಎನ್ನುವ ಹೇಳಿಕೆಗಳು ಶುದ್ಧ ಸುಳ್ಳು. ನಮ್ಮ ಯಾವ ಶಾಸಕರೂ ಬಿಜೆಪಿಗೆ ಹೋಗಲ್ಲ. ಈ ರೀತಿಯ ಪ್ರಚಾರ ಬಿಜೆಪಿಯ ತಂತ್ರವಷ್ಟೇ ಎಂದರು. ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ಸೇರುವ ಸಾಧ್ಯತೆಗಳ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸಾದ್ ಅವರು ಈಗ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ. ಅವರ ರಾಜಕೀಯ ನಡೆಯ ಕುರಿತು ನಾನೇನೂ  ಹೇಳುವುದಿಲ್ಲ ಎಂದು ತಿಳಿಸಿದರು.

ಸುನಿಲ್ ಬೋಸ್ ಅವರ ಹೆಸರು ಇನ್ನೂ ಅಂತಿಮಗೊಂಡಿಲ್ಲ. ಪಕ್ಷದ ಕಾರ್ಯಕರ್ತರ ಜೊತೆ ಮಾತನಾಡಿದ ಬಳಿಕ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದರು. ಗೋವಾ ಕನ್ನಡಿಗರ ಮೇಲೆ ನಡೆದಿರುವ ಹಲ್ಲೆ ಕುರಿತಂತೆ ಅಲ್ಲಿನ ಮುಖ್ಯಮಂತ್ರಿಯವರನ್ನು ಸಂಪರ್ಕಿಸಿ ಅವರಿಗೆ ರಕ್ಷಣೆ ಒದಗಿಸಲಾಗುವುದು ಎಂದು ತಿಳಿಸಿದರು.

ನಂಜನಗೂಡಿನ ಎಪಿಎಂಸಿ ಆವರಣದಲ್ಲಿ ನಡೆದ ಕಾಂಗ್ರೆಸ್ ಸಮಾವೇಶವನ್ನು ಸಿದ್ದರಾಮಯ್ಯ ಉದ್ಘಾಟಿಸಿದರು. ಕೆಪಿಸಿಸಿ ಅಧ್ಯಕ್ಷ, ಗೃಹಸಚಿವ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಸಹಕಾರಿ ಸಚಿವ ಮಹದೇವಪ್ರಸಾದ್, ಸಂಸದ ಧ್ರುವನಾರಾಯಣ ಮತ್ತಿತರರು ಉಪಸ್ಥಿತರಿದ್ದರು.

ದಲಿತ ಮುಖಂಡ ಶ್ರೀನಿವಾಸ ಪ್ರಸಾದ್ ಅವರ ರಾಜೀನಾಮೆ ನಂತರ ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹತ್ತಿರವಾಗುತ್ತಿದ್ದಂತೆ ವಾಕ್ಸಮರ ಬಿರುಸು ಪಡೆಯುತ್ತಿದೆ.

Leave a Reply

comments

Related Articles

error: