ಮೈಸೂರು

ವಿ. ಶ್ರೀನಿವಾಸ್ ಪ್ರಸಾದ್ ಮನವೊಲಿಸುವಲ್ಲಿ ಕಾಂಗ್ರೆಸ್ ವಿಫಲ: ಹೆಚ್. ವಿಶ್ವನಾಥ ಟೀಕೆ

ಕಾಂಗ್ರೆಸ್ ನಾಯಕರು ಹಿರಿಯ ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾದ್ ಅವರ ಮನವೊಲಿಸುವಲ್ಲಿ ವಿಫಲರಾಗಿದ್ದು, ನಾಯಕತ್ವ ಗುಣ ಮೆರೆಯುವ ಬದಲು ಮರೆಯುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಂಸದ ಹೆಚ್. ವಿಶ್ವನಾಥ್ ಟೀಕಿಸಿದ್ದಾರೆ.

ಮೈಸೂರಿನ ಜೆ.ಎಸ್.ಎಸ್. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಹಿರಿಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಹೆಚ್. ವಿಶ್ವನಾಥ್, ಸಮಾವೇಶಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ಶ್ರೀನಿವಾಸ್ ಪ್ರಸಾದ್ ಅವರು ಪಕ್ಷದ ಏಳ್ಗೆಗೆ ಶ್ರಮಿಸಿದಂಥವರು. ಅಂಥವರನ್ನು ಪಕ್ಷ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಯಾರೂ ಅವರನ್ನು ಮನವೊಲಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದೀಗ ಎಲ್ಲ ರಾಜಕೀಯ ಪಕ್ಷಗಳೂ ಸ್ವಾರ್ಥ ಸಾಧನೆಯಲ್ಲಿಯೇ ತಮ್ಮನ್ನು ತೊಡಗಿಸಿಕೊಂಡಿವೆ. ಶ್ರೀನಿವಾಸ್ ಪ್ರಸಾದ್ ಮತ್ತು ಸಿ.ಎಂ. ಇಬ್ರಾಹಿಂ ಅವರಿಬ್ಬರೂ ವಾಸ್ತವವನವನೇ ಮಾತನಾಡಿದ್ದಾರೆ. ಅವರು ವಿಮರ್ಶಿಸಿದ್ದನ್ನು ಒಪ್ಪಿಕೊಳ್ಳುವ ಕೆಲಸವಾಗಬೇಕು ಎಂದರು.

“ಅತೃಪ್ತರನ್ನು ತೃಪ್ತಿಪಡಿಸಲು ಸಾಧ್ಯವಿಲ್ಲ” ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಆದರೆ ಹೊಟ್ಟೆ ತುಂಬಿದವನಿಗೆ ಹಸಿದವನ ನೋವು ಅರ್ಥವಾಗುವುದಿಲ್ಲ. ಅವನ್ನೆಲ್ಲ ಅರ್ಥ ಮಾಡೊಕೊಳ್ಳುವವನೇ ನಿಜವಾದ ನಾಯಕನಾಗಿರುತ್ತಾನೆ ಎಂದು ಮಾರ್ಮಿಕವಾಗಿ ನುಡಿದರು.

Leave a Reply

comments

Related Articles

error: