ಮೈಸೂರು

ಯುವಕರು, ವಿದ್ಯಾವಂತರು ರಾಜಕೀಯಕ್ಕೆ ಬರಬೇಕು: ಎಂ.ರಾಮಯ್ಯ

ಮೈಸೂರು, ಆ.೨೨: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಿಯಾಗಿ ಆಡಳಿತ ನಡೆಸಬೇಕಾದರೆ ಯುವಕರು, ವಿದ್ಯಾವಂತರು, ಬುದ್ಧಿವಂತರು ರಾಜಕೀಯಕ್ಕೆ ಹೆಚ್ಚಾಗಿ ಬರಬೇಕೆಂದು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ ಕರೆ ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರದ ಕಡಕೊಳ, ಕೆ.ಎಂ.ಹುಂಡಿ, ಬ್ಯಾತಹಳ್ಳಿ, ದಡದಹಳ್ಳಿ, ಸಿಂಧುವಳ್ಳಿಗಳಲ್ಲಿ ನಡೆದ ಸಮಾರಂಭಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು ಡಾ.ಯತೀಂದ್ರ ಅವರು ವೈದ್ಯರಾಗಿದ್ದು, ಸರಳ ವ್ಯಕ್ತಿಯಾಗಿದ್ದಾರೆ. ಅವರು ವರುಣಾ ಕ್ಷೇತ್ರ ಮತ್ತು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಇತ್ತೀಚಿಗೆ ಗದಗನಲ್ಲಿ ನಡೆದ ಸಮಾರಂಭದಲ್ಲಿ ಸೇರಿದ್ದ ಸಾವಿರಾರು ಯುವಕರು ಡಾ.ಯತೀಂದ್ರ ಅವರನ್ನು ನೋಡಲು ಮುಗಿಬೀಳುತ್ತಿದ್ದರು. ಆದ್ದರಿಂದ ಮುಂದಿನ ದಿನಗಳಲ್ಲಿ ಡಾ.ಯತೀಂದ್ರ ಅವರು ಈ ರಾಜ್ಯವಾಳುವ ನಾಯಕರಾಗುವ ಲಕ್ಷಣಗಳು ಕಾಣಿಸುತ್ತಿವೆ ಎಂದರು.

ಸಮಾರಂಭದಲ್ಲಿ ಮಾಜಿ ಶಾಸಕ ಎಂ.ಸತ್ಯನಾರಾಯಣ, ಜಿ.ಪಂ.ಸದಸ್ಯ ರಾಕೇಶ್ ಪಾಪಣ್ಣ, ಜಿ.ಪಂ. ಮಾಜಿ ಸದಸ್ಯ ಹಾಗೂ ಮಲೈ ಮಹದೇಶ್ವರ ಬೆಟ್ಟದ ಧರ್ಮದರ್ಶಿ ಪಟೇಲ್ ಜವರೇಗೌಡ, ಕೂರ್ಗಳ್ಳಿ ಮಹದೇವು, ನಾರಾಯಣ, ಜವರಪ್ಪ, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂದಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

 

Leave a Reply

comments

Related Articles

error: