ಸುದ್ದಿ ಸಂಕ್ಷಿಪ್ತ
ಅಧಿಕಾರ ಸ್ವೀಕಾರ
ಮಡಿಕೇರಿ ಆ.22-ಮಡಿಕೇರಿ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾಗಿ ಎಂ.ಎನ್. ಸೌಮ್ಯ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಸಹಾಯಕ ನಿದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಎಂ.ಎನ್. ಸೌಮ್ಯ ಅವರು ಮಡಿಕೇರಿ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾಗಿ ಹೆಚ್ಚುವರಿ ಪ್ರಭಾರ ವಹಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. (ವರದಿ: ಕೆಸಿಐ, ಎಲ್.ಜಿ)