ಪ್ರಮುಖ ಸುದ್ದಿ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ಸಿದ್ದರಾಮಯ್ಯಗೆ ಕ್ಲೀನ್ ಚಿಟ್

ಪ್ರಮುಖ ಸುದ್ದಿ, ಬೆಂಗಳೂರು, ಆ.೨೩: ಸಿಎಂ ಸಿದ್ದರಾಮಯ್ಯ ಅವರ ಮೇಲಿದ್ದ ಅರ್ಕಾವತಿ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದ ತನಿಖೆ ಮುಗಿದ್ದು, ನ್ಯಾ.ಹೆಚ್.ಎಸ್.ಕೆಂಪಣ್ಣ ಆಯೋಗ ಕ್ಲೀನ್ ಚಿಟ್ ನೀಡಿದೆ.

ಸಿಎಂ ಸಿದ್ದರಾಮಯ್ಯ ೫೪೧ ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿ ತನಿಖೆಗೆ ಆಗ್ರಹಿಸಿದ್ದ ಹಿನ್ನೆಲೆಯಲ್ಲಿ ೨೦೧೪ ರ ಆಗಸ್ಟ್ ನಲ್ಲಿ ಕೆಂಪಣ್ಣ ಆಯೋಗವನ್ನು ರಚಿಸಲಾಗಿತ್ತು. ಎರಡು ವರ್ಷಗಳ ಸುದೀರ್ಘ ತನಿಖೆ ನಡೆಸಿ ಕರ್ನಾಟಕ ಮುಖ್ಯಕಾರ್ಯದರ್ಶಿ ಸುಭಾಷ್ ಕುಂಟಿಯಾ ಅವರಿಗೆ ವರದಿ ಸಲ್ಲಿಸಿದ್ದು, ವರದಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಿದೆ. ಮೂಲಗಳ ಪ್ರಕಾರ ಬಿಡಿಎ ಹಾಗೂ ನಗರಾಭಿವೃದ್ಧಿ ಇಲಾಖೆಯಲ್ಲಿನ ಕೆಲವು ಅಧಿಕಾರಿಗಳ ಲೋಪವನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಅರ್ಕಾವತಿ ಬಡಾವಣೆಯ ಅಭಿವೃದ್ಧಿಗೆ ಸಂಬಂಧಿಸಿದ ಅಕ್ರಮಗಳ ಬಗ್ಗೆ ದೂರುಗಳನ್ನು ಪರಿಶೀಲನೆಯ ಕೆಲಸವನ್ನು ಪೂರ್ಣಗೊಳಿಸಿದ್ದು, ವರದಿಯನ್ನಾಧರಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಷಯವಾಗಿದೆ ಎಂದು ಸುಮಾರು ೧,೮೬೧ ಪುಟಗಳ ವರದಿಯಲ್ಲಿ ಆಯೋಗ ಹೇಳಿದೆ. ಡಿನೋಟಿಫಿಕೇಷನ್ ತೂಗುಗತ್ತಿಯಿಂದ ಕ್ಲೀನ್‌ಚಿಟ್ ಪಡೆದಿರುವುದರಿಂದ ಸಿದ್ದರಾಮಯ್ಯ ಅವರು ಕೊಂಚ ನಿರಾಳರಾಗಿದ್ದಾರೆ. (ವರದಿ ಬಿ.ಎಂ)

 

Leave a Reply

comments

Related Articles

error: