ಮೈಸೂರು

ಚುನಾವಣೆಯೊಳಗೆ ಸಮಸ್ಯೆ ಬಗೆಹರಿಸಲು ಯತ್ನ: ಯತೀಂದ್ರ

ಮೈಸೂರು, ಆ.24: ವರುಣಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಚುನಾವಣೆಯೊಳಗೆ ಕ್ಷೇತ್ರದ ಮೂಲ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುವುದಾಗಿ ವರುಣಾ ಕ್ಷೇತ್ರದ ವಸತಿ ಜಾಗೃತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ವರುಣಾಕ್ಷೇತ್ರದ ಶಿವಪುರ, ಹೊಸಹುಂಡಿ, ಕೆಂಪೇಗೌಡನಹುಂಡಿ, ಬಡಗಲಹುಂಡಿ, ಮೂಡಲಹುಂಡಿ, ವರಕೋಡು ಗ್ರಾಮಗಳಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಬಡಗಲಹುಂಡಿ ಗ್ರಾಮದ ದೇವಸ್ಥಾನದ ಅಭಿವೃದ್ಧಿಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆಗೆ ಹಣ ಬಿಡುಗಡೆ ಮಾಡಲು ಪ್ರಯತ್ನಿಸುತ್ತೇವೆ. ಮೂಡಲಹುಂಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ ಈಗಾಗಲೇ 70 ಲಕ್ಷ ರೂ ಬಿಡುಗಡೆ ಆಗಿದೆ. ವರಕೋಡು ವರದರಾಜ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ 1.5 ಕೋಟಿ ಖರ್ಚು ಮಾಡಲಾಗಿದೆ. ರಸ್ತೆ ಅಭಿವೃದ್ಧಿಗೆ 70 ಲಕ್ಷ ಬಿಡುಗಡೆಯಾಗಿದೆ. ಅಂಬೇಡ್ಕರ್ ಸಮುದಾಯ ಭವನಕ್ಕೆ ಹಣ ಬಿಡುಗಡೆಯಾಗಿದೆ. ಕಲ್ಯಾಣಿ ಅಭಿವೃದ್ಧಿಗೂ ಹಣ ಬಿಡುಗಡೆಯಾಗಿದೆ. ಗ್ರಾಮಗಳ ಉಳಿದ ಕಾಮಗಾರಿಗಳನ್ನು ಹಂತಹಂತವಾಗಿ ಮಾಡಿಕೊಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ. ರಾಮಯ್ಯ, ಜಿ.ಪಂ. ಸದಸ್ಯೆ ಭಾಗ್ಯ, ರಾಜ್ಯ ವಾಲ್ಮಿಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂದಕುಮಾರ್, ಎಪಿಎಂಸಿ ಉಪಾಧ್ಯಕ್ಷ ಬಸವರಾಜು, ತಾ.ಪಂ. ಸದಸ್ಯರಾದ ಎಂ.ಟಿ. ರವಿಕುಮಾರ್, ಮುದ್ದುರಾಮೇಗೌಡ, ಸಿ.ಎಂ. ಸಿದ್ದರಾಮೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

 

Leave a Reply

comments

Related Articles

error: