ಕರ್ನಾಟಕ

ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಕ್ಯಾಮೆರಾ ‘ಕಣ್ಗಾವಲು’

2017ರಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಂದರ್ಭದಲ್ಲಿ ಎಲ್ಲ ಕೊಠಡಿಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ.

ಪರೀಕ್ಷಾ ಕೇಂದ್ರಗಳನ್ನು ಹೊಂದಿರುವ ಎಲ್ಲ ಸರಕಾರಿ, ಖಾಸಗಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜಿನ ಸಂಚಿತ ನಿಧಿಯಿಂದ ಕೆಟಿಟಿಪಿ ನಿಯಮದಂತೆ ಕ್ಯಾಮೆರಾ ಅಳವಡಿಸುವುದಕ್ಕೆ ತಗಲುವ ವೆಚ್ಚವನ್ನು ಭರಿಸುವಂತೆ ಇಲಾಖೆ ತಿಳಿಸಿದೆ.

ಈ ವರ್ಷ ನಡೆದ ಪಿಯುಸಿ ವಾರ್ಷಿಕ ಪರೀಕ್ಷೆ ವೇಳೆ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಎರಡು ಬಾರಿ ಸೋರಿಕೆಯಾ‍ಗಿತ್ತು. ಇದರಿಂದಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಸಚಿವ ಕಿಮ್ಮನೆ ರತ್ನಾಕರ ಸಚಿವ ಸ್ಥಾನ ಕಳೆದುಕೊಂಡಿದ್ದು, ಸರಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿದೆ.

2017ರ ಜನವರಿ 1 ರೊಳಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ  ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಇಲ್ಲದಿದ್ದಲ್ಲಿ ಅಂತಹ ಪರೀಕ್ಷಾ ಕೇಂದ್ರಗಳನ್ನು ರದ್ದುಪಡಿಸಲಾಗುವುದು ಎಂದರು.

Leave a Reply

comments

Related Articles

error: