ಮೈಸೂರು

ಕಾಲುಬಾಯಿ ಜ್ವರಕ್ಕೆ ಉಚಿತ ಲಸಿಕಾ ಕಾರ್ಯಕ್ರಮ

ಮೈಸೂರು ಜಿಲ್ಲೆಯಲ್ಲಿ ಜಾನುವಾರಿಗೆ ಉಚಿತವಾಗಿ 11ನೇ ಸುತ್ತಿನ ಕಾಲುಬಾಯಿ ಜ್ವರ ತಡೆಗಟ್ಟುವ ಲಸಿಕಾ ಕಾರ್ಯಕ್ರಮವನ್ನು ಇಂದಿನಿಂದ (ಅ.24) ನ.2 ರ ವರೆಗೆ ಹತ್ತಿರದ ಪಶುವೈದ್ಯಕೀಯ ಆಸ್ಪತ್ರೆಗಳಲ್ಲಿ ನೀಡಲಾಗುತ್ತಿದೆ.

ಜಾನುವಾರು ಮಾಲೀಕರು ಜಾನುವಾರಗಳಿಗೆ ತಪ್ಪದೆ ಲಸಿಕೆ ಹಾಕಿಸಿ ಇಲಾಖೆಯೊಂದಿ ಸಹಕರಿಸುವಂತೆ ಪಶುಪಾಲನಾ ಇಲಾಖೆ ಉಪನಿರ್ದೇಶಕರು ಕೋರಿದ್ದಾರೆ. ಗ್ರಾಮವಾರು ಲಸಿಕಾ ಕಾರ್ಯಕ್ರಮದ ದಿನಾಂಕ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕಿನ ಪಶುಪಾಲನ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಹತ್ತಿರದ ಪಶುವೈದ್ಯಕೀಯ ಸಿಬ್ಬಂದಿಗಳನ್ನು ಸಂಪರ್ಕಿಸುವಂತೆ ಕೋರಿದ್ದಾರೆ.

Leave a Reply

comments

Related Articles

error: