ಪ್ರಮುಖ ಸುದ್ದಿ

ಹಳ್ಳಿಗಳ ಅಭಿವೃದ್ಧಿಗೆ ಆದ್ಯತೆ: ಚೆಲುವರಾಯಸ್ವಾಮಿ

ಪ್ರಮುಖ ಸುದ್ದಿ, ಮದ್ದೂರು, ಆ.೨೪: ಶಾಸಕನಾದ ಅವಧಿಯಲ್ಲಿ ಕೊಪ್ಪ ಹೋಬಳಿ ಕೌಡ್ಲೆ ಭಾಗದ ಹಳ್ಳಿಗಳ ಅಭಿವೃದ್ಧಿಗೆ ಆದ್ಯತೆ ನೀಡಿzನೆ ಎಂದು ಶಾಸಕ ಎನ್.ಚೆಲುವರಾಯಸ್ವಾಮಿ ಹೇಳಿದರು.

ತಾಲೂಕಿನ ಕೊಪ್ಪ ಹೋಬಳಿಯ ಕೌಡ್ಲೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ, ಶಾಸಕರು ಮತ್ತು ಜಿಲ್ಲಾ ಪಂಚಾಯಿತಿ ಅನುದಾನದಡಿ ೧೨ ಲಕ್ಷ ರೂ. ವೆಚ್ಚದಲ್ಲಿ ಕೆ.ಎಂ.ಚನ್ನಪ್ಪ ಜ್ಞಾಪಕಾರ್ಥ ನಿರ್ಮಿಸಿರುವ ಸಾರ್ವಜನಿಕ ಸಮುದಾಯ ಶೌಚಾಲಯ ಹಾಗೂ ೯.೮೦ ಲಕ್ಷ ರೂ. ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು. ನಾಗಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಕೊಪ್ಪ ಹೋಬಳಿಯ ೮ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೧೦೦ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸಲಾಗಿದೆ. ಬಿದರಕೋಟೆ-ಕೆರಗೋಡು ಸಂಪರ್ಕ ಕಲ್ಪಿಸುವ ರಸ್ತೆ, ಮರಳಿಗ-ಕೀಳಘಟ್ಟ, ತಗ್ಗಹಳ್ಳಿ-ಅಣೆಹಳ್ಳಿ ಹಾಗೂ ಕೆ.ಹೆಚ್.ಕೊಪ್ಪಲು ಭಾಗದ ೭೦ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳಿದರು.

ಹೋಬಳಿಯ ನೀರಾವರಿ ಯೋಜನೆಗಳ ಆಧುನೀಕರಣಕ್ಕೆ ೧೫೦ ಕೋಟಿ ರೂ. ವೆಚ್ಚ ಮಾಡಲಾಗಿದೆ. ಉಳಿದ ೧೩೦ ಕೋಟಿ ರೂ. ಕಾಮಗಾರಿಗಳಿಗೆ ಅಂದಾಜುಪಟ್ಟಿ ತಯಾರಿಸಿದ್ದು, ಸರ್ಕಾರ ಅಂತಿಮವಾಗಿ ಅನುಮೋದನೆ ನೀಡಲಿದೆ ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷ ಕೆ.ಎನ್.ಗಿರೀಶ್, ಜಿಪಂ ಸದಸ್ಯೆ ರೇಣುಕಾ ರಾಮಕೃಷ್ಣ, ತಾಪಂ ಅಧ್ಯಕ್ಷೆ ಜಯಲಕ್ಷ್ಮಮ್ಮ, ಉಪಾಧ್ಯಕ್ಷ ಬಿ.ಎಂ.ರಘು, ನಿವೃತ್ತ ಕೆಎಎಸ್ ಅಧಿಕಾರಿ ಸಿ.ಕೃಷ್ಣೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

 

Leave a Reply

comments

Related Articles

error: