ಮೈಸೂರು

ಗಣೇಶ ಚತುರ್ಥಿ ಹಿನ್ನೆಲೆ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಿದ ಮಹಾಪೌರ

ಮೈಸೂರು,ಆ.25-ನಾಡಿನೆಲ್ಲೆಡೆ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಕ್ಯಾಪ್ಟನ್ ಅರ್ಜುನ ಅಂಡ್ ಟೀಂಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಶುಕ್ರವಾರ ನಗರದ ಅರಮನೆ ಆವರಣದಲ್ಲಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗೆ ಮಹಾಪೌರ ಎಂ.ಜೆ.ರವಿಕುಮಾರ್ ವಿಶೇಷ ಪೂಜೆ ಸಲ್ಲಿಸಿದರು. ಆನೆಗಳಿಗೆ ಕಬ್ಬು, ಬೆಲ್ಲ, ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಣೇಶ ಚತುರ್ಥಿಯನ್ನು ಆಚರಿಸಲಾಯಿತು.

ಗಜಪಡೆಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಮಹಾಪೌರ ಎಂ.ಜೆ.ರವಿಕುಮಾರ್, ಹಿಂದಿನಿಂದಲೂ ದಸರಾ ಆನೆಗಳಿಗೆ ಪೂಜೆ ಮಾಡಿಕೊಂಡು ಬರುತ್ತಿದ್ದೇವೆ. ಅದರಂತೆ ಇವತ್ತು ಕೂಡ ವಿಶೇಷ ಪೂಜೆ ಮಾಡಿದ್ದೇವೆ. ಮೈಸೂರಿಗರ ಪರವಾಗಿ ನಾನೂ ಪೂಜೆ ಮಾಡಿದ್ದೇ‌ನೆ. ದಸರಾಗೆ ಯಾವುದೇ ವಿಘ್ನ ಬರದಂತೆ ದೇವರಲ್ಲಿ ಬೇಡಿಕೊಂಡಿದ್ದೇನೆ. ಎಲ್ಲರೂ ಸಂತಸದಿಂದ ಗಣೇಶ ಚತುರ್ಥಿ ಆಚರಿಸೋಣ ಎಂದರು.

ಈ ಸಂದರ್ಭದಲ್ಲಿ ಶಾಸಕ ಎಂ.ಕೆ.ಸೋಮಶೇಖರ್, ಜಿಲ್ಲಾಧಿಕಾರಿ ಡಿ.ರಂದೀಪ್ ಇತರರು ಉಪಸ್ಥಿತರಿದ್ದರು. (ವರದಿ-ಆರ್.ವಿ, ಎಸ್.ಎನ್, ಎಂ.ಎನ್)

 

 

 

Leave a Reply

comments

Related Articles

error: