ಸುದ್ದಿ ಸಂಕ್ಷಿಪ್ತ

ಆ.28ಕ್ಕೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಮೈಸೂರು,ಆ.26-ವಿಕಲಚೇತನರ ನೆಹರು ಸ್ವ-ಸಹಾಯ ಸಂಘದ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಪ್ರಯುಕ್ತ ಆ.28 ರಂದು ಜಯನಗರದ ಮಹಾನಗರಪಾಲಿಕೆ ವಲಯ ಕಚೇರಿ 2 ರಲ್ಲಿ ವಿಕಲಚೇತನರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9 ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ಶಾಸಕ ಎಂ.ಕೆ.ಸೋಮಶೇಖರ್ ಉದ್ಘಾಟಿಸಲಿದ್ದಾರೆ. ಮಹಾಪೌರ ಎಂ.ಜೆ.ರವಿಕುಮಾರ್, ನಗರಪಾಲಿಕೆ ಹೆಚ್ಚುವರಿ ಆಯುಕ್ತರು ಹಾಗೂ ನಗರಪಾಲಿಕೆ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. (ವರದಿ-ಎಂ.ಎನ್)

Leave a Reply

comments

Related Articles

error: