ಮೈಸೂರು

ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಪೊಲೀಸರಿಂದ ಪಥಸಂಚಲನ

ಮೈಸೂರು,ಆ.26:- ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಾರ್ವಜನಿಕ ಗಣೇಶ ವಿಸರ್ಜನೆ ಮತ್ತು ಬಕ್ರೀದ್ ಕುರಿತು ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ನಗರದಲ್ಲಿ ಪೊಲೀಸರು ಪಥಸಂಚಲನ ನಡೆಸಿ ಸಂಚಲನ ಮೂಡಿಸಿದರು.

ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ ನೇತೃತ್ವದಲ್ಲಿ ನಡೆದ ಪಥಸಂಚಲನದಲ್ಲಿ ಸಹಸ್ರಾರು ಪೊಲೀಸರು ಪಾಲ್ಗೊಂಡಿದ್ದರು. ಈ ಸಂದರ್ಭ ಮಾತನಾಡಿದ ಆಯುಕ್ತರು ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದೆಂದು ಪಥಸಂಚಲನ ನಡೆಸಲಾಗಿದೆ. ಯಾವುದೇ ವ್ಯಕ್ತಿ ಅಥವಾ ಸಂಘ-ಸಂಸ್ಥೆಗಳು ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಲ್ಲಿ ಅಂಥಹವರ ವಿರುದ್ಧ ಕಾನೂನು ರೀತ್ಯಾ ಶಿಸ್ತು ಕ್ರಮವಹಿಸಲಾಗುವುದೆಂದು ತಿಳಿಸಿದರು.

ಪಥಸಂಚಲನ ಫೌಂಟೇನ್ ಸರ್ಕಲ್ ನಿಂದ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಈ ಸಂದರ್ಭ ಡಿಸಿಪಿಗಳು, ಎಸಿಪಿಗಳು ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: