ಸುದ್ದಿ ಸಂಕ್ಷಿಪ್ತ

ಗಂಗೋತ್ರಿ ಶಾಲೆಯಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ

ಮೈಸೂರು,ಆ.26 : ನಗರದ ಗಂಗೋತ್ರಿ ಶಾಲೆಯಲ್ಲಿ ಪರಿಸರ ಸ್ನೇಹಿ ಗಣೇಶ ಚತುರ್ಥಿಯನ್ನು ಆಚರಿಸಲಾಯಿತು.

ಬಣ್ಣದ ಗಣೇಶನಿಂದ ಪ್ರಕೃತಿ ಮೇಲಾಗುತ್ತಿರುವ ವೈಪರಿತ್ಯವನ್ನು ವಿದ್ಯಾರ್ಥಿಗಳಿಗೆ ಮನನ ಮಾಡಿ ಪರಿಸರ ಸ್ನೇಹಿ ಜೇಡಿ ಮಣ್ಣಿನ  ಗಣೇಶನನ್ನು ಸಾಂಕೇತಿಕವಾಗಿ ಕೂರಿಸಿ ಪೂಜಿಸಲಾಯಿತು. ವಿದ್ಯಾರ್ಥಿಗಳು ಬಣ್ಣ ಬಣ್ಣದ ಉಡುಪುಗಳನ್ನು ತೊಟ್ಟು ಸಂಭ್ರಮದಿಂದ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷ ಟಿ.ರಂಗಪ್ಪ, ಮುಖ್ಯೋಪಾಧ್ಯಾಯಿನಿ ಕಾಂತಿನಾಯಕ್, ಅಧ್ಯಾಪಕ ವೃಂದ ಹಾಜರಿದ್ದರು. (ಕೆ.ಎಂ.ಆರ್)

Leave a Reply

comments

Related Articles

error: