ಕರ್ನಾಟಕಪ್ರಮುಖ ಸುದ್ದಿ

ಗಣೇಶ ವಿಸರ್ಜನೆ ವೇಳೆ ನೀರು ಪಾಲಾಗಿದ್ದ ಯುವಕನ ಶವ ಪತ್ತೆ

ರಾಜ್ಯ(ಮಂಡ್ಯ)ಆ.28:- ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ರಾಗಿಬೊಮ್ಮನಹಳ್ಳಿಯಲ್ಲಿ ಗಣೇಶ ವಿಸರ್ಜನೆ ವೇಳೆ ಯುವಕ ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ.

ಮೃತನನ್ನು ಗ್ರಾಮದ ವಿಜಯ್‌ಕುಮಾರ್(25) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ  ಯುವಕ ನೀರು ಪಾಲಾಗಿದ್ದ. ಯುವಕನ ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಶೋಧ ನಡೆಸಿದ್ದರು. ತಡರಾತ್ರಿ ವೇಳೆಗೆ ಯುವಕನ ಮೃತದೇಹ ಪತ್ತೆಯಾಗಿದೆ. ಯುವಕನ ಮೃತದೇಹ ನೋಡಿ  ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: