ಸುದ್ದಿ ಸಂಕ್ಷಿಪ್ತ

ಪ್ರೌಢಶಾಲಾ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಮೈಸೂರು, ಆ.28 : ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಪ್ರೌಢಶಾಲಾ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಆಗಸ್ಟ್ 29 ರಂದು ಬೆಳಿಗ್ಗೆ 9 ಗಂಟೆಗೆ ಹುಣಸೂರು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.

ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ಹೆಚ್.ಪಿ. ಮಂಜುನಾಥ್ ಅವರು ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು.

ಲೋಕಸಭಾ ಸದಸ್ಯ ಪ್ರತಾಪ ಸಿಂಹ, ಹುಣಸೂರು ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಪದ್ಮಮ್ಮ ಬಸವರಾಜು, ಪ್ರೇಮ್ಕುಿಮಾರ್, ಹುಣಸೂರು ನಗರಸಭೆ ಅಧ್ಯಕ್ಷ ಲಕ್ಷ್ಮಣ, ಉಪಾಧ್ಯಕ್ಷೆ ಧನಲಕ್ಷ್ಮಮ್ಮ ಶಿವರಾಜು,  ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಲಕ್ಷ್ಮಿ ರಾಜಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯೆ ಡಾ.ಬಿ. ಪುಷ್ಪಅಮರನಾಥ್, ಗೌರಮ್ಮ ಸೋಮಶೇಖರ್, ಸುರೇಂದ್ರ, ಸಾವಿತ್ರಮ್ಮ ಬಿಎಸ್. ಮಂಜು, ಸಿ. ಅನಿಲ್ ಕುಮಾರ್, ಮೈಸೂರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಬಿ.ಕೆ.ಎಸ್. ವರ್ದನ್ ಹಾಗೂ ಇನ್ನಿತರ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

-ಎನ್.ಬಿ.

Leave a Reply

comments

Related Articles

error: