ಮೈಸೂರುಸುದ್ದಿ ಸಂಕ್ಷಿಪ್ತ

ಕುರುಬ ಜನಾಂಗದ ವಿದ್ಯಾರ್ಥಿ ಪುರಸ್ಕಾರಕ್ಕೆ ಅರ್ಜಿ

2015-16ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾದ ಮೈಸೂರು ಜಿಲ್ಲೆಯ ಕುರುಬ ಜನಾಂಗದ ವಿದ್ಯಾರ್ಥಿಗಳಿಗೆ ಸಂತ ಶ್ರೀ ಕನಕದಾಸರ ಜಯಂತ್ಯೋತ್ಸವ ಸಮಿತಿ ವತಿಯಿಂದ ಶ್ರೀ ಕನಕದಾಸರ 259ನೇ ಜಯಂತ್ಯೋತ್ಸವದ ಕಾರ್ಯಕ್ರಮದಲ್ಲಿ ಪುರಸ್ಕಾರಿಸಲಾಗುವುದು ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಬ್ಯಾಂಕ್ ಎಂ. ಪುಟ್ಟಸ್ವಾಮಿ ತಿಳಿಸಿದ್ದಾರೆ.

ಜಾತಿಪ್ರಮಾಣ ಪತ್ರದೊಂದಿಗೆ ನವೆಂಬರ್ 10 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ದೊರೆಯುವ ಸ್ಥಳ: ಶ್ರೀ ಕೊಲ್ಲಾಪುರದಮ್ಮನವರ ದೇವಸ್ಥಾನ, ಶಾಂತಲ ಚಿತ್ರಮಂದಿರದ ಹತ್ತಿರ, ನಾರಾಯಣಶಾಸ್ತ್ರೀ ರಸ್ತೆ, ಮೈಸೂರು.

ಆಸಕ್ತರು ಬ್ಯಾಂಕ್ ಎಂ. ಪುಟ್ಟಸ್ವಾಮಿ, ಎಂ. ನಾಗರಾಜು, ಎಂ. ಮಹದೇವಗೌಡ (ಬಿಎಸ್‍ಎನ್‍ಎಲ್‍) ಇವರನ್ನು ಮೊಬೈಲ್ ದೂರವಾಣಿ ಸಂಖ್ಯೆ: 9845116664, 9902647826, 9480325656 ಮೂಲಕ ಸಂಪರ್ಕಿಸಬಹುದು.

 

Leave a Reply

comments

Related Articles

error: