ಕರ್ನಾಟಕ

ಸೆ.4ಕ್ಕೆ ರಾಜ್ಯಕ್ಕೆ ಆಗಮಿಸಲಿರೋ ಸಚಿವ ಪ್ರಕಾಶ್ ಜಾವಡೇಕರ್

ಬೆಂಗಳೂರು,ಆ.28-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಸಂಚಲನ ಉಂಟಾಗಿದ್ದು, ಪಕ್ಷದ ಚಟುವಟಿಕೆಯನ್ನು ಇನ್ನಷ್ಟು ಬಿರುಸುಗೊಳಿಸಲು ಪಕ್ಷದ ನೂತನ ಚುನಾವಣಾ ಉಸ್ತುವಾರಿಯಾಗಿ ನೇಮಕವಾಗಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಸೆ.4 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಅಮಿತ್ ಶಾ ಸೂಚನೆಯಂತೆ ಪ್ರಕಾಶ್ ಜಾವಡೇಕರ್ ಪಕ್ಷದ ರಾಜ್ಯ ವ್ಯವಹಾರಗಳ ಮೇಲೆ ನಿಗಾ ವಹಿಸಲಿದ್ದಾರೆ. ಉಸ್ತುವಾರಿಯಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಜಾವಡೇಕರ್ ರಾಜ್ಯಕ್ಕೆ ಆಗಮಿಸಲಿದ್ದು, ಬಿಜೆಪಿ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಬಿಜೆಪಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ಸೆ.4 ರಂದು ನಿಗದಿಯಾಗಿದ್ದು, ಜಾವಡೇಕರ್ ನೇತೃತ್ವದಲ್ಲಿ ಇಡೀ ದಿನ ಸಭೆ ನಡೆಯಲಿದೆ. ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಅಮಿತ್ ಶಾ ಭೇಟಿ ನೀಡಿ ವಾರದೊಳಗೆ ಜಾವಡೇಕರ್ ಅವರನ್ನು ಉಸ್ತುವಾರಿಯಾಗಿ ನೇಮಕ ಮಾಡಿದ್ದರು. ಕೂಡಲೇ ಅವರು ರಾಜ್ಯಕ್ಕೆ ಆಗಮಿಸಿ ತಮ್ಮ ಜವಾಬ್ದಾರಿ ತೆಗೆದುಕೊಳ್ಳುತ್ತಿರುವುದು ನೋಡಿದರೆ ರಾಷ್ಟ್ರೀಯ ಬಿಜೆಪಿ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: