ಸುದ್ದಿ ಸಂಕ್ಷಿಪ್ತ

ಡೆಂಗ್ಯೂ, ಚಿಕುನ್ ಗುನ್ಯಗೆ ರೋಗನಿರೋಧಕ ಹೋಮಿಯೋಪತಿ ಚಿಕಿತ್ಸೆ

ಮಂಡ್ಯ, ಆ. 29 : ಮಂಡ್ಯ ಜಿಲ್ಲೆಯಾದ್ಯಂತ, ಡೆಂಗ್ಯೂ ಹಾಗೂ ಚಿಕುನ್ ಗುನ್ಯ ಕಾಯಿಲೆಗಳಿಗೆ ಆಯುಷ್ ಪದ್ಧತಿಯಲ್ಲಿ ಅರಿವನ್ನು ಮೂಡಿಸಲಾಗುತ್ತಿದೆ. ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆ ಹಾಗೂ ಜಿಲ್ಲೆಯ ಎಲ್ಲಾ ಆಯುಷ್ ಆಸ್ಪತ್ರೆ ಮತ್ತು ಚಿಕಿತ್ಸಾಲಯಗಳಲ್ಲಿ ಡೆಂಗ್ಯೂ ಘಟಕವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಲು ಮುಂದಾಗಬೇಕು.

ನಾಲ್ಕು ವೈದ್ಯರನ್ನೊಳಗೊಂಡ ತಂಡವನ್ನು ಈಗಾಗಲೇ ರಚಿಸಲಾಗಿದ್ದು, ಜಿಲ್ಲೆಯಾದ್ಯಂತ ಈ ತಂಡದಿಂದ ಪರಿವೀಕ್ಷಣೆ ಪ್ರಾರಂಭಿಸಲಾಗಿದೆ. ಆಶಾ ಕಾರ್ಯಕರ್ತೆಯರ ಸಹಕಾರದೊಂದಿಗೆ ತಂಡವು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜು, ಆಸ್ಪತ್ರೆಗಳಿಗೆ ಭೇಟಿ ನೀಡಿ, ಡೆಂಗ್ಯೂ ಹಾಗೂ ಚಿಕುನ್ ಗುನ್ಯ ಕಾಯಿಲೆಗಳ ಬಗ್ಗೆ ಅರಿವನ್ನು ಮೂಡಿಸುತ್ತಿದೆ.

ರೋಗನಿರೋಧಕ ಹೋಮಿಯೋಪತಿ ಚಿಕಿತ್ಸೆಯನ್ನು ಕಾಯಿಲೆ ಪತ್ತೆಯಾದಲ್ಲಿ ಉಚಿತವಾಗಿ ಆಯುಷ್ ಇಲಾಖೆ ವತಿಯಿಂದ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಡೆಂಗ್ಯೂ ಘಟಕ, ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆ, ಮಂಡ್ಯ ಹಾಗೂ ಜಿಲ್ಲೆಯ ಎಲ್ಲಾ ಆಯುಷ್ ಆಸ್ಪತ್ರೆಗೆ ಸಾರ್ವಜನಿಕರು ಭೇಟಿ ನೀಡಿ ಚಿಕಿತ್ಸೆ ಪಡೆಯಬಹುದಾಗಿದೆ.

-ಎನ್.ಬಿ.

Leave a Reply

comments

Related Articles

error: