ಮೈಸೂರು

ರಾಜೇಂದ್ರ ಶ್ರೀಗಳ ಪುತ್ಥಳಿ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಶಿಲಾನ್ಯಾಸ 

ಮೈಸೂರು, ಆ.೨೯: ಸುತ್ತೂರು ವೀರ ಸಿಂಹಾಸನ ಮಠದ ಇಪ್ಪತ್ತಮೂರನೇ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಪುತ್ಥಳಿ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಶಿಲಾನ್ಯಾಸ ನೆರವೇರಿಸಿದರು.

ನಗರದ ಗನ್‌ಹೌಸ್‌ನಲ್ಲಿರುವ ಜೆಎಸ್‌ಎಸ್ ಮಹಾವಿದ್ಯಾಪೀಠದ ಮುಂಭಾಗ ನಿರ್ಮಿಸುತ್ತಿರುವ ಸುಮಾರು ೩ ಕೋಟಿ ವೆಚ್ಚದ, ೧೧ ಅಡಿ ಎತ್ತರದ ಪಂಚಲೋಹದ ಪುತ್ಥಳಿ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸಂಸದ ಆರ್.ಧ್ರುವನಾರಾಯಣ್, ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಶಾಸಕರಾದ ಜಿ.ಟಿ.ದೇವೇಗೌಡ, ವಾಸು, ಎಂ.ಕೆ.ಸೋಮಶೇಖರ್, ಮಂಜುನಾಥ್, ಪುಟ್ಟರಂಗಶೆಟ್ಟಿ, ಗೀತಾಮಹದೇವಪ್ರಸಾದ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯೀಮಾ ಸುಲ್ತಾನ, ಮೇಯರ್ ಎಂ.ಜೆ.ರವಿಕುಮಾರ್, ಭಾಷ್ಯಂ ಸ್ವಾಮೀಜಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

 

Leave a Reply

comments

Related Articles

error: