ದೇಶಪ್ರಮುಖ ಸುದ್ದಿ

ರೈತರ ಆದಾಯ ದ್ವಿಗುಣಗೊಳಿಸುವುದು ಕೇಂದ್ರ ಸರ್ಕಾರದ ಉದ್ದೇಶ ಸುಪ್ರೀಂಗೆ ಮನವರಿಕೆ

ನವದೆಹಲಿ,ಆ.29-ಸಾಲಬಾಧೆ, ಬೆಳೆ ನಷ್ಟ ಹೀಗೆ ಅನೇಕ ಕಾರಣಗಳಿಗೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರೈತರ ಆತ್ಮಹತ್ಯೆಯನ್ನು ತಡೆಯಲು 2022ರ ವೇಳೆಗೆ ಅವರ ಆದಾಯ ಪ್ರಮಾಣವನ್ನು ದ್ವಿಗುಣಗೊಳಿಸುವ ಉದ್ದೇಶ ಕೇಂದ್ರ ಸರ್ಕಾರಕ್ಕಿದೆ ಎಂದು ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಕೇಂದ್ರ ಕೃಷಿ ಸಚಿವಾಲಯ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದು,  ಕಡಿಮೆ ಆದಾಯ ಹೊಂದಿರುವ ರೈತರ ಸಮಸ್ಯೆಗಳನ್ನು ಸರ್ಕಾರ ಆಲಿಸಲಿದೆ. ಬಡತನ ರೇಖೆಗಿಂತ ಕೆಳಗಿರುವ ರೈತರ ಕೃಷಿ ಸಮಸ್ಯೆಗಳ ಬಗ್ಗೆ ಸರ್ಕಾರ ವಿಶೇಷ ಗಮನ ಹರಿಸಲಿದೆ. ರೈತರ ಆದಾಯ ಮಟ್ಟವನ್ನು ಹೆಚ್ಚಿಸುವ ಮೂಲಕ ಆತ್ಮಹತ್ಯೆಯಂತಹ ಸಮಸ್ಯೆಗಳನ್ನು ಬಗೆಹರಿಸಬಹುದು ಎಂದು ಹೇಳಿದೆ.

2022ರ ವೇಳೆಗೆ ರೈತರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಲು ಕೃಷಿ, ಸಹಕಾರ ಮತ್ತು ರೈತರ ಅಭಿವೃದ್ಧಿ ಇಲಾಖೆಗಳು ಆಂತರಿಕ ಸಚಿವ ಸಮಿತಿಯನ್ನು ರಚಿಸಿದ್ದು, ಅವು ರೈತರ ಆದಾಯಗಳನ್ನು ಹೆಚ್ಚಿಸಲು ವಿವಿಧ ಆಯಾಮಗಳನ್ನು ಹುಡುಕುತ್ತಿದೆ. ಅದಕ್ಕೆ ಸೂಕ್ತ ಕಾರ್ಯತಂತ್ರಗಳನ್ನು ಶಿಫಾರಸು ಮಾಡಲಿದೆ ಎಂದು ವರದಿ ಹೇಳಿದೆ. (ವರದಿ-ಎಂ.ಎನ್) 

Leave a Reply

comments

Related Articles

error: