ಕರ್ನಾಟಕ

ಶಿಕ್ಷಕರ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲು ಚಿಂತನೆ : ಶಾಸಕ ನಾರಾಯಣಗೌಡ

ರಾಜ್ಯ(ಮಂಡ್ಯ)ಆ.29:- ಇದೇ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನವನ್ನು ಕೆ.ಆರ್.ಪೇಟೆ ಪಟ್ಟಣದ ಶಿಕ್ಷಕರ ಭವನದ ಹಿಂಭಾಗದ ಆವರಣದಲ್ಲಿ  ಅರ್ಥಪೂರ್ಣವಾಗಿ ಆಚರಣೆ ಮಾಡಲು ಶಾಸಕ ನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ನಾರಾಯಣಗೌಡ  ಶಿಕ್ಷಕರ ದಿನಾಚರಣೆ ಭವಿಷ್ಯದ ಸತ್ಪ್ರಜೆಗಳನ್ನು ರೂಪಿಸುವ ಶಿಕ್ಷಕರನ್ನು ಗೌರವಿಸುವ ಮೂಲಕ ಅವರಿಗೆ ಸಲ್ಲಬೇಕಾದ ಗೌರವವನ್ನು ನೀಡುವ ಕುರಿತು ನಿರ್ಧರಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು, ಉತ್ತಮ ಶಿಕ್ಷಕರನ್ನು, ಪ್ರತಿಭಾವಂತ ಶಿಕ್ಷಕರ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಗುವುದು. ನಿವೃತ್ತ ಪ್ರಾಂಶುಪಾಲ ಹಾಗೂ ಸಾಹಿತಿ ಶಿ.ಕುಮಾರಸ್ವಾಮಿ ಅವರಿಂದ ಪ್ರಧಾನ ಉಪನ್ಯಾಸ ಇರುತ್ತದೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರು ಕಡ್ಡಾಯವಾಗಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಶಾಸಕರು ಮನವಿ ಮಾಡಿದರು.
ಸಭೆಯಲ್ಲಿ ತಾ.ಪಂ.ಅಧ್ಯಕ್ಷೆ ಜಯಲಕ್ಷ್ಮೀಸ್ವಾಮಿನಾಯಕ್, ಉಪಾಧ್ಯಕ್ಷ ಜಾನಕೀರಾಂ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎನ್.ವಿಜಯಕುಮಾರ್, ಜಿ.ಪಂ.ಸದಸ್ಯರಾದ ಹೆಚ್.ಟಿ.ಮಂಜು, ರಾಮದಾಸ್, ತಹಸೀಲ್ದಾರ್ ಕೆ.ರತ್ನಾ, ತಾ.ಪಂ.ಇಒ ವೈ.ಎನ್.ಚಂದ್ರಮೌಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ನಾಯಕ್, ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಧರಣೇಶ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: