ಪ್ರಮುಖ ಸುದ್ದಿಮೈಸೂರು

ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ರಾಜೀನಾಮೆ

ರಾಜ್ಯ ಮಹಿಳಾ ಆಯೋಗದ ಅಧ‍್ಯಕ್ಷೆ ಮಂಜುಳಾ ಮಾನಸ ಅವರು ತಮ್ಮ ಸ್ಥಾನಕ್ಕೆ ಸೋಮವಾರ ದಿಢೀರ್ ರಾಜೀನಾಮೆ ನೀಡಿದ್ದಾರೆ.

ಮೂರು ವರ್ಷಗಳ ಅಧಿಕಾರಾವಧಿ ಮುಗಿಯಲು ಇನ್ನೂ ಎಂಟೂವರೆ ತಿಂಗಳು ಬಾಕಿ ಇರುವಾಗಲೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ರಾಜೀನಾಮೆ ಪತ್ರ ತಲುಪಿಸಿರುವುದಾಗಿ ಮಂಜುಳಾ ಮಾನಸ ತಿಳಿಸಿದ್ದಾರೆ.

“ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ರಾಜೀನಾಮೆ ಸಲ್ಲಿಸಿದ್ದೇನೆ. ಪಕ್ಷದ ಇತರ ಕಾರ್ಯಕರ್ತರಿಗೂ ಅವಕಾಶ ಸಿಗಲಿ ಎಂಬುದು ನನ್ನ ಉದ್ದೇಶ. ಪಕ್ಷದ ಕಾರ್ಯಕರ್ತೆಯಾಗಿ ದುಡಿಯುತ್ತೇನೆ” ಎಂದು ಹೇಳಿಕೆ ನೀಡಿದ್ದಾರೆ.

Leave a Reply

comments

Related Articles

error: