ಮೈಸೂರು

ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಸೆಳೆಯಲು ಬಿಜೆಪಿ, ಜೆಡಿಎಸ್ ಸ್ಪರ್ಧೆ

ಪಕ್ಷಪಾತದಿಂದ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷಕ್ಕೆ ಸೆಡ್ಡು ಹೊಡೆದು ಹೊರಬಂದಿರುವ ಹಿರಿಯ ರಾಜಕಾರಣಿ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಸೆಳೆಯಲು ರಾಷ್ಟ್ರೀಯ ಪಕ್ಷ ಬಿಜೆಪಿ ಹಾಗೂ ಸ್ಥಳೀಯ ಜೆಡಿಎಸ್ ಸ್ಪರ್ಧೆಗೆ ನಿಂತಿವೆ.

ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಶ್ರೀನಿವಾಸ ಪ್ರಸಾದ್ ಅವರೊಂದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದು ಪಕ್ಷಕ್ಕೆ ಬಂದರೆ ಉನ್ನತ ಸ್ಥಾನಮಾನ ನೀಡುವ ಆಮಿಷವನ್ನು ಒಡ್ಡಿದ್ದಾರೆ ಎನ್ನಲಾಗಿದೆ.

imagesಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ವಿಧಾನಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ರಾಜ್ಯ ಬಿಜೆಪಿಯೂ ರಾಜ್ಯಾಪಾಲ ಅಥವಾ ವಿಧಾನ ಪ್ರತಿಪಕ್ಷದ ನಾಯಕ ಸ್ಥಾನದ ಆಫರ್ ನೀಡಿದ್ದು ಕುಟುಂಬ ವರ್ಗದವರು ಬಿಜೆಪಿಯ ಕಡೆ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಬಿಜೆಪಿಯೂ ಮೊದಲ ಪ್ರಯತ್ನಕ್ಕೆ ಕೈಹಾಕಿದ್ದು ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ನಿರ್ದೇಶನದಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಜೆಪಿ ರಾಜ್ಯ ವಕ್ತಾರ ಗೋ.ಮಧುಸೂದನ್ ಸೋಮವಾರ ರಾತ್ರಿ ಮೈಸೂರಿನ ಜಯಲಕ್ಷ್ಮೀ ಪುರಂನಲ್ಲಿರುವ ಪ್ರಸಾದ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.  ಅಲ್ಲದ, ರಾಜೀನಾಮೆಯ ನಂತರ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಗೂ ಪಕ್ಷದ ಹಿರಿಯ ಮುಖಂಡರು ಭೇಟಿಯಾಗಿದ್ದರು.

ಜೆ.ಡಿ.ಎಸ್.ನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಒಂದು ಹೆಜ್ಜೆ ಮುಂದೆ ಹೋಗಿ ರಾಜ್ಯಾಧ್ಯಕ್ಷ ಸ್ಥಾನವನ್ನೇ ಬಿಟ್ಟುಕೊಟುವುದಾಗಿ ಪ್ರಸಾದ್ ಗೆ ಆಶ್ವಾಸನೆ ನೀಡಿದ್ದು ಪಕ್ಷಕ್ಕೆ ಕರೆತರಲು ಸರ್ವ ರೀತಿಯಿಂದಲೂ ಪ್ರಯತ್ನ ನಡೆಸಿದ್ದಾರೆ. ನೀವೂ ಪಕ್ಷವನ್ನು ಸಂಘಟಿಸಿ ಬಲಪಡಿಸಿದ್ದೀರಿ. ನನಗೀಗ ಆ ಶಕ್ತಿ ಇಲ್ಲವೆಂದು ಕುಮಾರಸ್ವಾಮಿಯ ಆಹ್ವಾನವನ್ನು ನಯವಾಗಿ ತಳ್ಳಿಹಾಕಿದ್ದಾರೆ.

ನಿಗೂಢ ನಡೆ : ಜಾತ್ಯಾತೀತ ಭಾವನೆಯಿರುವ ಶ್ರೀನಿವಾಸ ಪ್ರಸಾದ್  ಮುಂದಿನ ನಡೆ ಏನು ಎನ್ನುವುದು ಇನ್ನೂ ನಿಗೂಢವಾಗಿಯೇ ಇದೆ. ಪ್ರಬಲ ಕಾಂಗ್ರೆಸ್ ವಿರುದ್ಧ ತೊಡೆತಟ್ಟಿರುವ ಪ್ರಸಾದ್ ಗೆ ಬೆಂಬಲವಾಗಿ ಪಕ್ಷ ಹಾಗೂ ಮುಖಂಡರು ನಿಲ್ಲಬೇಕು ಎನ್ನುವ ನಿಲುವು ಹೊಂದಿದ್ದು, ಈಗ ಪಕ್ಷೇತರನಾಗಿ ಉಪ ಚುನಾವಣೆ ಎದುರಿಸಿ ನಂತರ ಕಾದು ನೋಡುವ ತಂತ್ರವೂ ಪ್ರಸಾದ್ ಅವರದು. ಬಹುತೇಕವಾಗಿ ರಾಷ್ಟ್ರೀಯ ಪಕ್ಷ ಬಿಜೆಪಿಯ ಕಡೆಗೆ ಒಲವು ತೋರುತ್ತಿದ್ದು ಮೈಸೂರಿನ ವಿಭಾಗದಲ್ಲಿ ಬಿಜೆಪಿಗೆ ಅಷ್ಟಾಗಿ ಬೆಂಬಲವಿಲ್ಲದ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತಿ ಸಮಾವೇಶ :  ಇತ್ತೀಚಿಗೆ ಕಾಂಗ್ರೆಸ್ ಸರ್ಕಾರದಿಂದ ನಂಜನಗೂಡಿನಲ್ಲಿ ನಡೆದ ಪಕ್ಷದ ಸಮಾವೇಶಕ್ಕೆ ‘ಉತ್ತರನ ಪೌರುಷ ಒಲೆ ಮುಂದೆ ಎಂದು ವ್ಯಂಗ್ಯವಾಡಿ, ಪಕ್ಷದ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸಮಾವೇಶಕ್ಕೆ ಪ್ರತಿಯಾಗಿ ಸಮಾವೇಶವನ್ನು ನಡೆಸುವ ಬಲಾಬಲವನ್ನು ಪ್ರದರ್ಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆ ನೀಡುವ ಸಿದ್ಧತೆಯಲ್ಲಿ ಶ್ರೀನಿವಾಸ ಪ್ರಸಾದ್ ಇದ್ದಾರೆ.

Leave a Reply

comments

Related Articles

error: