ಸುದ್ದಿ ಸಂಕ್ಷಿಪ್ತ
ಆ.31 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ
ಮಡಿಕೇರಿ, ಆ.29: ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್, 31 ರಂದು ಬೆಳಗ್ಗೆ 10.30 ಗಂಟೆಗೆ ಕೂಡಿಗೆ ಕ್ರೀಡಾಶಾಲೆಯ ಆಟದ ಮೈದಾನದಲ್ಲಿ 2017-18ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಲಿದೆ.
ಯೋಜನೆ ಮತ್ತು ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಮೀನುಗಾರಿಕೆ ಸಚಿವರಾದ ಪ್ರಮೋದ್ ಮದ್ವರಾಜ್, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಪದ್ಮಿನಿ ಪೊನ್ನಪ್ಪ, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿ.ಪಂ.ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ.ಪಿ.ಶಶಿ ಸುಬ್ರಮಣಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀನಿವಾಸ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ.ಕೆ.ವಿಜು ಸುಬ್ರಮಣಿ, ಮಡಿಕೇರಿ ತಾ.ಪಂ. ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಇತರರು ಪಾಲ್ಗೊಳ್ಳಲಿದ್ದಾರೆ. (ವರದಿ: ಕೆಸಿಐ, ಎಲ್.ಜಿ)