ಮೈಸೂರು

ಎನ್.ಆರ್.ಮೊಹಲ್ಲಾ ವ್ಯಕ್ತಿಗಳ ಮೇಲೆ ಹಲ್ಲೆ ಪ್ರಕರಣ : ಯುವತಿ ವಶಕ್ಕೆ

ಮೈಸೂರಿನ ಎನ್.ಆರ್.ಮೊಹಲ್ಲಾದಲ್ಲಿ ವ್ಯಕ್ತಿಯೋರ್ವರ ಮನೆಗೆ ನುಗ್ಗಿದ ಗುಂಪೊಂದು ಮನೆಯಲ್ಲಿದ್ದ ತಂದೆ ಹಾಗೂ ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಯುವತಿಯೋರ್ವಳ ಹೆಸರೂ ಕೇಳಿ ಬಂದಿತ್ತು. ಇದೀಗ ಪೊಲೀಸರು ಯುವತಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಶಿವಾಜಿ ರಸ್ತೆಯ ಮೊದಲನೇ ಕ್ರಾಸ್ ನಿವಾಸಿಗಳಾದ ಮೊಕ್ತಾರ್(50), ಅವರ ಪುತ್ರ ಮೊಹಿನ್ ಅಹಮದ್(30) ಹಲ್ಲೆಗೊಳಗಾದವರಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೊಹಿನ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಯುವತಿಯೋರ್ವಳು ಕರೆ ಮಾಡಿ ಬೆದರಿಕೆ ಹಾಕಿದ್ದಳು ಎಂಬ ಮಾಹಿತಿಯ ಹಿನ್ನೆಲೆಯಲ್ಲಿ  ಜಾಡು ಹಿಡಿದು ಹೊರಟ ಪೊಲೀಸರಿಗೆ ಕೊನೆಗೂ ಯುವತಿ ಸಿಕ್ಕಿದ್ದು ಆಕೆಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಯುವತಿಯನ್ನು ಮೊನಿಷಾ ಮಂಜುನಾಥ್ ಎಂದು ಗುರುತಿಸಲಾಗಿದೆ.

ಎನ್.ಆರ್.ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್, ಎಸ್ಐ ಶಬ್ಬೀರ್ ಯುವತಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

ಘಟನೆಯ ಹಿನ್ನೆಲೆ: ಮೊಹಿನ್ ಅಹ್ಮದ್ ಅವರ ಪತ್ನಿಯ ಸಹೋದರ ಮೊನಿಷಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದು, ಅದಕ್ಕೆ ಮೊಹಿನ್ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಮೊನಿಷಾ ಅವರ ಸಮುದಾಯಕ್ಕೆ ಸೇರಿದವಳಲ್ಲದ ಕಾರಣ ಬಾಮೈದನಿಗೆ ಅವಳನ್ನು ಬಿಡುವಂತೆ ತಿಳಿಸಿದ್ದರು ಎನ್ನಲಾಗಿದೆ. ಇದರಿಂದ ಕೋಪಗೊಂಡ ಯುವತಿ ನಾನು ಎನು ಮಾಡುತ್ತೇನೆ ನೋಡಿ ಎಂದು ಕರೆ ಮಾಡಿ ಬೆದರಿಕೆ ಹಾಕಿದ್ದಳು ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಅದರಂತೆ ಕರೆಯ ಜಾಡು ಹಿಡಿದು ಹೊರಟ ಪೊಲೀಸರಿಗೆ ಸುಳಿವು ಲಭಿಸಿ ಯುವತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

comments

Related Articles

error: